ಮಡಿಕೇರಿ, ಜು. ೨೪: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ೨೦೨೬-೨೭ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ನೀಡಲಾಗುವ ದೂರ ಶಿಕ್ಷಣ ಮಾದರಿಯ ಉಚಿತ ಪದವಿ/ಸ್ನಾತ್ತಕೋತ್ತರ ಪದವಿ ಕೋರ್ಸುಗಳಿಗೆ ಆನ್‌ಲೈನ್‌ನ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು hಣಣಠಿs://miಟಿoಡಿiಣಥಿ.ಞsouಠಿoಡಿಣಚಿಟ.ಛಿom ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ. ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು (ಮುಸ್ಲಿಂ, ಜೈನ್ ಬೌದ್ದ, ಸಿಖ್ ಮತ್ತು ಪಾರ್ಸಿ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಒಟ್ಟು ಆದಾಯ ರೂ. ೮ ಲಕ್ಷಗಳನ್ನು ಮೀರಬಾರದು. ಅಭ್ಯರ್ಥಿಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಿಯಮಗಳ ಅನುಸಾರ ಕನಿಷ್ಟ ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕು. ಸರ್ಕಾರಿ ನೌಕರರಾಗಿರಬಾರದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹಿಂದಿನ ಸಾಲಿನಲ್ಲಿ ಈ ಯೋಜನೆ ಅಡಿಯಲ್ಲಿ ಪ್ರವೇಶಾತಿಯನ್ನು ಪಡೆದಿರಬಾರದು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಯಾವುದೇ ಕೋರ್ಸಿನಲ್ಲಿ ಪ್ರಸ್ತುತ ಪ್ರವೇಶಾತಿಯನ್ನು ಪಡೆದಿರಬಾರದು.

ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ ೦೮೨೭೨-೨೨೫೫೨೮/ ೨೨೦೨೧೪ ಹಾಗೂ ಅಲ್ಪಸಂಖ್ಯಾತರ ಸಹಾಯಕವಾಣಿ ಸಂಖ್ಯೆ ೮೨೭೭೭೯೯೯೯೦, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಾಯವಾಣಿ ಸಂಖ್ಯೆ ೮೬೯೦೫೪೪೫೨೨, ೯೪೪೮೬೬೮೮೦, ೯೯೪೫೩೬೬೦೬೨, ೯೧೧೩೫೧೨೫೬೫, ೯೬೧೧೪೧೮೭೨೬, ನ್ನು ಹಾಗೂ ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂ.ಸಂ. ೮೫೪೮೦೬೮೫೧೯, ತಾಲೂಕು ಮಾಹಿತಿ ಕೇಂದ್ರ ವೀರಾಜಪೇಟೆ ದೂರವಾಣಿ ಸಂಖ್ಯೆ ೯೯೦೦೭೩೧೦೩೭ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ ೯೯೭೨೭೯೯೦೯೧ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ.ಎಸ್. ಸಚಿನ್ ತಿಳಿಸಿದ್ದಾರೆ.

ಮಡಿಕೇರಿ : ರಾಜ್ಯಾದ್ಯಂತ ಹಾಗೂ ಹೊರರಾಜ್ಯದಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸAಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ೨೦೨೬-೨೭ನೇ ಸಾಲಿನ ಸಾಮಾನ್ಯ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಸೇವಾ ಸಿಂಧು Sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ತಾ. ೨೨.೦೭.೨೦೨೬ ರಿಂದ ತಾ. ೨೦.೮.೨೦೨೬ರ ಸಂಜೆ ೫.೩೦ ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರದ ಆದೇಶ ಸಂಖ್ಯೆ ಕಸಂವಾ ೨೮೦ ಕಸಧ ೨೦೨೪ (ಭಾ-೧) ತಾ. ೩೧-೧೦-೨೦೨೫ ರಲ್ಲಿನ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‌ಸೈಟ್ ತಿತಿತಿ.ಞಚಿಟಿಟಿಚಿಜಚಿsiಡಿi.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ೦೮೦-೨೪೪೧೦೫೭೪, ೦೮೦-೨೨೨೧೩೫೩೦, ೯೯೮೬೮೩೭೦೩೭, ೦೮೦೨೨೨೪೧೩೨೫ ಅನ್ನು ಹಾಗೂ ಆಯಾಯ ಜಿಲ್ಲೆಯ ವ್ಯವಸ್ಥಾಪಕರು, ಸೇವಾಸಿಂಧು ಇವರನ್ನು ಸಂಪರ್ಕಿಸಬಹುದಾಗಿದೆ (ಸಮಯ ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ಗಂಟೆ) (ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ) ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಮಡಿಕೇರಿ : ಕುಶಾಲನಗರ ತಾಲೂಕು ಕುಶಾಲನಗರ ವ್ಯಾಪ್ತಿಯ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಇಲ್ಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ೨೦೨೬-೨೭ನೇ ಸಾಲಿಗೆ ೧೮೦ ಸಂಖ್ಯಾಬಲದ (ಪ್ರತಿ ವಿಭಾಗಕ್ಕೆ ೬೦ ರಂತೆ) ಸಂಖ್ಯಾಬಲದೊAದಿಗೆ (ವಿಜ್ಞಾನ ವಿಭಾ-ಪಿಸಿಎಂಬಿ, ವಾಣಿಜ್ಯ ವಿಭಾಗ ಸಿಇಬಿಎ, ಕಲಾ ವಿಭಾಗ ಹೆಚ್‌ಇಪಿಎಸ್ ವಿಷಯಗಳಿಗೆ) ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. ೦೮೨೭೨-೨೨೫೫೨೮, ೨೨೦೨೧೪ ಹಾಗೂ ಪ್ರಾಂಶುಪಾಲರು ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಕುಶಾಲನಗರ ತಾಲೂಕು, ಕುಶಾಲನಗರ ದೂ.ಸಂ. ೬೩೬೧೮೦೨೦೩೭, ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂ.ಸಂ. ೮೫೪೮೦೬೮೫೧೯, ತಾಲೂಕು ಮಾಹಿತಿ ಕೇಂದ್ರ ವೀರಾಜಪೇಟೆ ದೂ.ಸಂ.೯೯೦೦೭೩೧೦೩೭ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ. ೯೯೭೨೭೯೯೦೯೧ ನ್ನು ಸಂಪರ್ಕಿಸಬಹುದು.