ಮಡಿಕೇರಿ, ಜು. ೨೪: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಎರಡು ಅಕಾಡೆಮಿ ಕಚೇರಿಗಳಲ್ಲಿ ಪ್ರತ್ಯೇಕವಾಗಿ ಸನ್ಮಾನ ಕಾರ್ಯಕ್ರಮ ನಡೆಯಿತು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸನ್ಮಾನಿಸಿ ಗೌರವಿಸಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸದಸ್ಯರಾದ ಚಂದ್ರಶೇಖರ ಪೆರಾಲು ತೇಜಕುಮಾರ್ ಕುಡೆಕಲ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಇವರುಗಳು ಮಲ್ಲಿಕಾರ್ಜುನ ಸ್ವಾಮಿ ಅವರ ಸೇವೆಯ ಕುರಿತು ಮೆಚ್ಚುಗೆಯ ನುಡಿಗಳನ್ನುಡಿದರು.
ನಿವೃತ್ತ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸುಮಾರು ೨೯ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಲಾಗಿದ್ದು, ಸರ್ಕಾರಿ ಸೇವೆಯಲ್ಲಿ ಸಣ್ಣ ಕೆಲಸಗಳು, ದೊಡ್ಡ ಗೌರವ ತರುತ್ತವೆ. ಆ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡಿದರೆ ಸಾರ್ವಜನಿಕರು ಸದಾ ಸ್ಮರಿಸುತ್ತಾರೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕಿ ನಿರ್ಮಲ ಮಠಪತಿ ಮಾತನಾಡಿ, ಆಯಾಯ ಪ್ರದೇಶದಲ್ಲಿನ ಸ್ಥಳೀಯ ಭಾಷೆ, ಸಂಸ್ಕೃತಿ, ಕಲೆಗಳನ್ನು ಗೌರವಿಸಬೇಕು ಎಂದು ಅವರು ಹೇಳಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ನಿಡ್ಯಮಲೆ ಡಾ. ಜ್ಞಾನೇಶ್, ಸೂದನ ಎಸ್. ಈರಪ್ಪ, ಲೋಕೇಶ್ ಊರುಬೈಲು, ಸಂದೀಪ್ ಪೂಳಕಂಡ, ವಿನೋದ್ ಮೂಡಗದ್ದೆ, ಮೋಹನ್ ಮೊನ್ನಚ್ಚನ, ಗೋಪಾಲ್ ಪೆರಾಜೆ, ಕುದ್ಪಾಜೆ ಕೆ. ಪ್ರಕಾಶ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಚೊಟ್ಟೆಯಂಡ ಸಂಜು ಕಾವೇರಪ್ಪ, ನಾಪಂಡ ಗಣೇಶ್, ಕಂಬೆಯAಡ ಡೀನಾ ಬೋಜಣ್ಣ, ಚೆಪ್ಪುಡಿರ ಉತ್ತಪ್ಪ, ನಾಯಂದಿರ ಶಿವಾಜಿ, ಪೊನ್ನೀರ ಗಗನ್, ಪಿ.ಕೆ.ಕುಟ್ಟಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ರಿಜಿಸ್ಟಾçರ್ ಚಿನ್ನಸ್ವಾಮಿ, ಇತರರು ಇದ್ದರು.