ಸಿದ್ದಾಪುರ, ಜು. ೨೫: ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಾ ಬೆಳೆಗಳನ್ನು ನಾಶಪಡಿಸುತ್ತಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯಿತು.

ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಮೀನುಕೊಲ್ಲಿ ಶಾಖೆಯ ವ್ಯಾಪ್ತಿಯ ಚೆಟ್ಟಳ್ಳಿ ಸಮೀಪದ ಈರಳೆವಳಮುಡಿ, ಚೇರಳ, ಹಾಗೂ ಹೊರೂರು, ಮೋದುರು, ಮತ್ತಿಕಾಡು ಭಾಗದ ಕಾಫಿ ತೋಟಗಳಲ್ಲಿ ಬೀಡುಬಿಟ್ಟ ಕಾಡಾನೆಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಒತ್ತಾಯಿಸಿದ ಮೇರೆಗೆ ಶನಿವಾರದಂದು ಕಾರ್ಯಾಚರಣೆ ನಡೆಸಲಾಯಿತು.

ಈ ಸಂದರ್ಭ ಕಾಡಾನೆಗಳ ಗುಂಪು ಬೇರ್ಪಟ್ಟು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಸುತ್ತಾಡಿದವು. ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಮರಿಯಾನೆ ಸೇರಿದಂತೆ ೬ ಕ್ಕೂ ಅಧಿಕ ಕಾಡಾನೆಗಳು ಕಂಡುಬAದಿದ್ದು ಕಾರ್ಯಾಚರಣೆ ತಂಡವು ಮಳೆಯ ನಡುವೆ ಕಾಫಿ ತೋಟದೊಳಗೆ ಕಾರ್ಯಾಚರಣೆ ನಡೆಸಿ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾಯಿತು.

ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಮಾರ್ಗದರ್ಶನದಲ್ಲಿ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್ ಆರ್. ನೇತೃತ್ವದಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ಮಧುಕುಮಾರ್, ಸಚಿನ್ ನಿಂಬಾಳ್ಕರ್, ಅರಣ್ಯ ಸಿಬ್ಬಂದಿ ಕೆದಲಪ್ಪ ಮತ್ತು ನಾಗರಾಜ್ ಹಾಗೂ ಮಡಿಕೇರಿ ಮತ್ತು ಆನೆಕಾಡು ಮೀನುಕೊಲ್ಲಿ, ಆರ್‌ಆರ್‌ಟಿ ತಂಡ, ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಾಸು