ಮಡಿಕೇರಿ, ಜು. ೨೫: ಸಹಕಾರ ಸಂಘದ ಮಹಾಸಭೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೋರ್ವರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಸAಪಾಜೆ ಪಯಸ್ವಿನಿ ಕೃಷಿ ಪತ್ತಿನ ವ್ಯವಸಾಯ ಸೇವಾ ಸಹಕಾರ ಸಂಘದ ಮಹಾಸಭೆ ಇಂದು ಏರ್ಪಡಾಗಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದ ಚೆಂಬು ಗ್ರಾಮ ನಿವಾಸಿ ಆದಂ ಕುಂಞ ಸೆಂಟಿಯಾರ್ (೬೫) ಮಾತನಾಡುತ್ತಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿ ಕುಸಿದು ಕುಳಿತಿದ್ದಾರೆ.

ಕೂಡಲೇ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ನೀಡುತ್ತಿದ್ದ ವೇಳೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು.

ಕಾಂಗ್ರೆಸ್ ಮುಖಂಡರಾಗಿದ್ದ ಆದಂ ಕುಂಞ ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ, ನಾಲ್ಕು ಅವಧಿಗೆ ನಿರ್ದೇಶಕರಾಗಿ, ಚೆಂಬು ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಜನಾನುರಾಗಿಯಾಗಿದ್ದ ಆದಂ ಅವರ ಅಂತ್ಯಕ್ರಿಯೆ ಸಂದರ್ಭ ಜಾತಿ-ಮತ ಬೇಧವಿಲ್ಲದೆ ಎಲ್ಲ ಧರ್ಮದವರು ಪಾಲ್ಗೊಂಡಿದ್ದರು. ಮೃತರು ಪತ್ನಿ, ಈರ್ವರು ಪುತ್ರರನ್ನು ಅಗಲಿದ್ದಾರೆ.