ಗೋಣಿಕೊಪ್ಪಲು, ಜು. ೨೫: ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ಕೈಗೊಂಡ ಪ್ರತಿಭಟನೆಗೆ ಬೆಂಬಲವಾಗಿ ಹಾಗೂ ಕೇಂದ್ರ ಬಿಜೆಪಿ ನಾಯಕತ್ವ ಹಾಗೂ ಪೊಲೀಸರು, ವಿದ್ಯಾರ್ಥಿಗಳ ಮೇಲೆ ನಡೆಸಿದ ದೌರ್ಜನ್ಯದ ವಿರುದ್ಧ ಗೋಣಿಕೊಪ್ಪಲು ಬಸ್ ನಿಲ್ದಾಣದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಿತು.
ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಗಳನ್ನು ಕೂಗಲಾಯಿತು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಯುವ ಕಾಂಗ್ರೆಸ್, ಮಹಿಳಾ ಘಟಕ ಸೇರಿದಂತೆ ಇನ್ನಿತರ ಮುಂಚೂಣಿ ಘಟಕದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಭಾಗವಹಿಸಿ ಮಾತನಾಡಿ, ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಯನ್ನು ಅನುಸರಿಸುತ್ತಿದೆ. ವಿದ್ಯಾರ್ಥಿಗಳು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ. ಪ್ರತಿಭಟನಾಕಾರರ ಮೇಲೆ ಬಲ ಪ್ರಯೋಗ ಮಾಡಿರುವುದು ಖಂಡನೀಯ. ದೆಹಲಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ನ್ಯಾಯಯುತ ಹೋರಾಟ ನಡೆಸುತ್ತಿದ್ದರೂ ಅವರ ಪ್ರತಿಭಟನೆಯನ್ನು ಹತ್ತಿಕ್ಕಲು ಹಲವು ರೀತಿಯ ಧಮನಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಪಿಸಿದರು.
ಅಗತ್ಯ ವಸ್ತುಗಳು, ಅಡುಗೆ ಅನಿಲ, ಪೆಟ್ರೋಲ್-ಡಿಸೇಲ್ ಬೆಲೆ. ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ. ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟು ಕಾಂಗ್ರೆಸ್ ಪಕ್ಷ ಹೋರಾಟ ಮುಂದುವರೆಸಲಿದೆ ಎಂದರು.
ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಾತನಾಡಿ ನೀಟ್ ಪರೀಕ್ಷೆಯಲ್ಲಿನ ಅಕ್ರಮವು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಗಿದೆ ಎಂದರು. ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಮಾತನಾಡಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದರು. ಪ್ರತಿಭಟನೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮೂಕಳೇರ ಆಶಾ ಪೂಣಚ್ಚ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ಬಾನಂಡ ಪ್ರಥ್ಯು, ಪಿ.ಆರ್.ಪಂಕಜ, ಬಾಲಕೃಷ್ಣ, ಮೂಕಳೇರ ಕುಶಾಲಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪಲ್ವಿನ್ ಪೂಣಚ್ಚ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜೆ.ಕೆ. ಸೋಮಣ್ಣ, ನಾಮೇರ ಅಂಕಿತ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್ ಸದಸ್ಯರಾದ ಲಾಲುಸ್ಟಾö್ಯಲಿನ್, ಜಿಲ್ಲಾ ಉಪಾಧ್ಯಕ್ಷೆÀ ನೂರೆರ ಧನ್ಯ ರವೀಂದ್ರ, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಕೊಕ್ಕಂಡ ರೂಪ ಭೀಮಯ್ಯ, ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಬಿ.ಶೆಟ್ಟಿಗೇರಿ ಗ್ರಾ.ಪಂ. ಮಾಜಿ ಅಧ್ಯಕ್ಷÀ ಕೊಲ್ಲಿರ ಬೋಪಣ್ಣ, ಮಾಯಮುಡಿ ಗ್ರಾ,ಪಂ, ಮಾಜಿ ಅಧ್ಯಕ್ಷ ಆಪಟ್ಟೀರ ಟಾಟೂ ಮೊಣ್ಣಪ್ಪ, ಹಿರಿಯ ಮುಖಂಡರಾದ ಕೊರಕುಟ್ಟಿರ ಸರ ಚಂಗಪ್ಪ, ಮಣಿಕುಂಞ, ವಿ.ಟಿ.ವಾಸು, ವಿಲ್ಸನ್, ಎ.ಜೆ.ಬಾಬು, ಮತ್ರಂಡ ದಿಲ್ಲು, ತೆನ್ನಿರ ಮೈನಾ, ಕುಪ್ಪಂಡ ಗಣೇಶ್, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಮೂಕಳೇರ ಸುಮಿತ್ರ ಗಣೇಶ್, ಕೋಳೇರ ಭಾರತಿ, ಸೇರಿದಂತೆ ವಿವಿಧ ವಲಯಗಳ ಅಧ್ಯಕ್ಷರುಗಳಾದ ಚೆಪ್ಪುಡೀರ ಬೋಪಣ್ಣ, ಕೊಕ್ಕಂಡ ರೋಶನ್, ಕುಂಞಮಡ ರಮೇಶ್ ಸೇರಿದಂತೆ ಪಕ್ಷದ ಜಿಲ್ಲಾ ಘಟಕ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಬೂತ್ ಅಧ್ಯಕ್ಷರುಗಳು, ಸಾಮಾಜಿಕ ಜಾಲತಾಣ, ಅಲ್ಪಸಂಖ್ಯಾತರ ಘಟಕ, ಎಸ್‌ಟಿ ಘಟಕ, ಒಬಿಸಿ ಘಟಕ ಹಾಗೂ ಯೂತ್ ಕಾಂಗ್ರೆಸ್ ಪದಾಧಿಕಾರಿಗಳು, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗವÀಹಿಸಿದ್ದರು.