ಚಿತ್ರ-ವರದಿ : ವಾಸು ಆಚಾರ್ಯ

ಸಿದ್ದಾಪುರ. ಜು. ೨೭: ಮಾಲ್ದಾರೆ ಸಮೀಪದ ಇತಿಹಾಸ ಪ್ರಸಿದ್ಧ ಪ್ರಾಚೀನ ಕಾಲದ ಗದ್ದಿಗೆ ಬೆಟ್ಟ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅನ್ಯಕೋಮಿನ ಯಾರೋ ಕಿಡಿಗೇಡಿಗಳು ದೇವಾಲಯದ ಆವರಣದಲ್ಲಿ ಭಾನುವಾರದಂದು ಗೋರಿ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಕೃತ್ಯ ನಡೆಸಿದ ವ್ಯಕ್ತಿಗಳನ್ನು ಬಂಧಿಸಬೇಕೆAದು ಹಿಂದೂಪರ ಸಂಘಟನೆಯಿAದ ಮಾಲ್ದಾರೆಯ ಗದ್ದಿಗೆ ಬೆಟ್ಟ ದೇವಾಲಯದ ಆವರಣದಲ್ಲಿ ಪ್ರತಿಭಟನೆ ನಡೆಯಿತು ಅಲ್ಲದೆ ಅಧಿಕಾರಿಗಳಿಂದ ಸಮರ್ಪಕವಾಗಿ ಮಾಹಿತಿ ದೊರೆಯದ ಹಿನ್ನೆಲೆಯಲ್ಲಿ ರಸ್ತೆ ತಡೆ ಕೂಡ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಸೋಮವಾರದಂದು ಹಿಂದೂ ಪರ ಸಂಘಟನೆಗಳ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಕಾಲ್ನಡಿಗೆಯಲ್ಲಿ ಬೆಟ್ಟಕ್ಕೆ ತೆರಳಿ ದೇವಾಲಯದ ಆವರಣದಲ್ಲಿ ಸಮಾಧಿ ನಿರ್ಮಾಣ ಮಾಡಿದ್ದಾರೆ ಎಂಬ ಜಾಗದಲ್ಲಿ ಗುಂಡಿ ತೆಗೆದು ಪರಿಶೀಲನೆ ನಡೆಸಿದರು. ಅಲ್ಲದೆ ಅದನ್ನು ತೆರವುಗೊಳಿಸಿದರು. ನೂರಾರು ಮಂದಿ ಹಿಂದೂ ಪರ ಸಂಘಟನೆ ಬೆಟ್ಟವನ್ನು ಏರಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಅಲ್ಲದೆ ಅರಣ್ಯ ಇಲಾಖೆಯ ಹಾಗೂ ಪೊಲೀಸ್ ಇಲಾಖೆಯ ೪ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಘಟನೆ ನಡೆದು ೨೪ ಗಂಟೆಗಳು ಕಳೆದರೂ ಕೂಡ ಆರೋಪಿಗಳನ್ನು ಬಂಧಿಸುವಲ್ಲಿ ಎರಡು ಇಲಾಖೆ ಅಧಿಕಾರಿಗಳು ನಿರ್ಲಕ್ಷ ತೋರಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡುಬAದಿತು. ಅರಣ್ಯ ಇಲಾಖೆಯ ಮೇಲಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಸೂಕ್ತ ಮಾಹಿತಿಯನ್ನು ನೀಡಬೇಕು ಹಾಗೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕೂಡಲೆ ಬಂಧಿಸದಿದ್ದಲ್ಲಿ ಹೋರಾಟ ನಡೆಸಲಾಗುವುದೆಂದು ಮತ್ತು ಕೊಡಗು ಬಂದ್ ಮಾಡಲಾಗುವುದೆಂದು ಪ್ರತಿಭಟನೆಗಾರರು ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಸಂಘ ಸಂಚಾಲಕ್ ಮನು ಕಾವೇರಪ್ಪ, ಮಾತನಾಡಿ ಇತಿಹಾಸ ಪ್ರಸಿದ್ಧ ಪ್ರಾಚೀನ ಕಾಲದ ಶ್ರೀ ಸಿದ್ದೇಶ್ವರ ದೇವಾಲಯದ ಬಳಿ ಯಾರೋ ಅನ್ಯಕೋಮಿನ ಕಿಡಿಗೇಡಿಗಳು ವಾಮಾಚಾರಗಳನ್ನು ಮಾಡಿ ಶ್ರದ್ಧಾ ಭಕ್ತಿಯಿಂದ ಆರಾಧನೆ ಮಾಡುವ ಹಿಂದೂ ಧರ್ಮಕ್ಕೆ ಅವಮಾನ ಎಸಗಿದ್ದಾರೆ ಇದು ಖಂಡನೀಯ ಎಂದರು.

ಅಶಾಂತಿಯನ್ನು ಸೃಷ್ಟಿಸುವವರನ್ನು ಹಾಗೂ ಇಲ್ಲಿಗೆ ಅಕ್ರಮ ಪ್ರವೇಶಿಸಿ ಕೃತ್ಯ ನಡೆಸಿದ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಜಿಲ್ಲಾಧ್ಯಂತ ಹಿಂದೂ ಪರ ಸಂಘಟನೆಗಳು ಹೋರಾಟವನ್ನು ಮುಂದುವರಿಸಲಾಗುವುದೆAದು ಎಚ್ಚರಿಕೆಯನ್ನು ನೀಡಿದರು.

ಕೊಡಗು ಜಿಲ್ಲಾ ಹಿಂದೂಪರ ಸಂಘಟನೆಯ ಪ್ರಮುಖರಾದ ಭೋಜೆಗೌಡ ಮಾತನಾಡಿ ಶ್ರೀ ಸಿದ್ದೇಶ್ವರ ದೇವಾಲಯಕ್ಕೆ ಅಕ್ರಮವಾಗಿ ಆಗಮಿಸಿ, ಅರಣ್ಯ ಇಲಾಖೆಯ ಅನುಮತಿಯನ್ನು ಪಡೆಯದೆ ಸಮಾಧಿ ನಿರ್ಮಾಣ ಮಾಡಲು ಬಂದ ಅನ್ಯಕೋಮಿನವರಿಗೆ ಯಾರು ಅವಕಾಶ ನೀಡಿದ್ದು ಎಂದು ಅರಣ್ಯ ಇಲಾಖೆ ಅಧಿಕಾರಿಗಳನ್ನು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರು.

ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಅವರು ತಿಳಿಸಿದರು. ಬಿಜೆಪಿ ಮುಖಂಡ ಹಾಗೂ ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಮಾತನಾಡಿ ಅನ್ಯ ಕೋಮಿನ ವ್ಯಕ್ತಿಗಳು ದೇವಾಲಯದ ಬದಿಯಲ್ಲಿ ಸಮಾಧಿ ನಿರ್ಮಾಣ ಮಾಡಿ ಪ್ರಾರ್ಥನೆ ಮಾಡಿದ್ದಾರೆ ಇಲ್ಲಿಗೆ ಆಗಮಿಸಿದ ಕಿಡಿಗೇಡಿಗಳು ಮಾಂಸಾಹಾರಿ ಸೇವಿಸಿರುವುದು ಅಕ್ರಮ ಚಟುವಟಿಕೆ ನಡೆಸುತ್ತಿರುವುದು ಕಂಡುಬAದಿದ್ದು ಕೂಡಲೆ ಆರೋಪಿಗಳನ್ನು ಬಂಧಿಸುವAತೆ ಒತ್ತಾಯಿಸಿದರು.

ಹಿಂದೂ ಸಂಘಟನೆಯ ಪ್ರಮುಖರಾದ ಸಂತೋಷ್ ಮಾತನಾಡಿ ಶ್ರೀ ಸಿದ್ದೇಶ್ವರ ದೇವಾಲಯವು ಚೋಳರ ಕಾಲದಲ್ಲಿ ಪ್ರಾರಂಭವಾಗಿರುವ ಪುರಾತನ ದೇವಾಲಯವಾಗಿದ್ದು ಈ ದೇವಾಲಯದಲ್ಲಿ ಇಂತಹ ಕೃತ್ಯಗಳನ್ನು ನಡೆಸಿರುವ ವ್ಯಕ್ತಿಗಳನ್ನು ಕೂಡಲೆ ಪತ್ತೆ ಹಚ್ಚಿ ಅವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಬೇಕೆAದು ಒತ್ತಾಯಪಡಿಸಿದರು. ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಸುಮಾರು ಮೂರು ಕಿಲೋಮೀಟರ್ ದೂರದವರೆಗೆ ಕಿಡಿಗೇಡಿಗಳು ಆಗಮಿಸಿದಾಗ ಇಲಾಖಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಕಾರಣವೇನು ಎಂದು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪ್ರತಿಭಟನಾಕಾರರು ಮಾಲ್ದಾರೆ ಪಿರಿಯಾಪಟ್ಟಣ ರಸ್ತೆಗೆ ಆಗಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು.

ಮಾಲ್ದಾರೆಯ ಸಮೀಪ ಇರುವ ಪ್ರಾಚೀನಕಾಲದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಕಿಡಿಗೇಡಿಗಳು ಸಮಾಧಿ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಆರೋಪಿಗಳನ್ನು ಬಂಧಿಸುವAತೆ ಒತ್ತಾಯಿಸಿ ದೇವಾಲಯಕ್ಕೆ ತೆರಳುವ ರಸ್ತೆ ಬದಿಯಲ್ಲಿ ಸೋಮವಾರದಿಂದ ನೂರಾರು ಸಂಖ್ಯೆಯಲ್ಲಿ ಹಿಂದೂಪರ ಸಂಘಟನೆಯವರು ಮಹಿಳೆಯರು ಸೇರಿದಂತೆ ಜಮಾಯಿಸಿ ಘಟನೆಯನ್ನು ಖಂಡಿಸಿದರು. ಅಲ್ಲದೆ ಮೂರು ಕಿಲೋಮೀಟರ್ ದೂರದಲ್ಲಿ ಬೆಟ್ಟದ ತುದಿಯಲ್ಲಿ ಇರುವ ಸ್ಥಳಕ್ಕೆ ತೆರಳಲು ಸಂಘಟಕರು ನಿರ್ಧರಿಸಿದರು. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಕೂಡಲೇ ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಪ್ರತಿಭಟನಾಗಾರರೊಂದಿಗೆ ಬೆಟ್ಟಕ್ಕೆ ತೆರಳಿದರು. ಬೆಟ್ಟದ ತುದಿಯಲ್ಲಿರುವ ಶ್ರೀ ಸಿದ್ದೇಶ್ವರ ದೇವಾಲಯಕ್ಕೆ ದುರ್ಗಮ ಹಾದಿಯಲ್ಲಿ ಮಳೆಯ ನಡುವೆ ಕಷ್ಟಪಟ್ಟು ಎಲ್ಲರೂ ಏರಿದರು. ಹಿಂದೂ ಪರ ಸಂಘಟನೆಯ ಮುಖಂಡರು ಈ ಭಾಗದಲ್ಲಿ ಸಿ ಸಿ ಕ್ಯಾಮೆರಾ ಅಳವಡಿಸುವಂತೆ ಅರಣ್ಯ ಇಲಾಖೆಗೆ ಒತ್ತಾಯ ಪಡಿಸಿದರು.ಅಧಿಕಾರಿಗಳ ಭರವಸೆ ನಡುವೆ ರಸ್ತೆ ತಡೆ ಹಿಂಪಡೆಯಲಾಯಿತು.

ಅರಣ್ಯ ಇಲಾಖೆಯ ಅಧಿಕಾರಿ ನವೀನ್ ಕುಮಾರ್ ಅವರು ಪ್ರತಿಭಟನಾಕಾರರೊಂದಿಗೆ ಮಾತನಾಡಿ ದೇವಾಲಯಕ್ಕೆ ಅಕ್ರಮ ಪ್ರವೇಶ ಮಾಡಿ ಕೃತ್ಯ ನಡೆಸಿದ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿ ಅವರ ವಾಹನಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಭರವಸೆಯನ್ನು ನೀಡಿದರು. ಇದಲ್ಲದೆ ಪೊಲೀಸ್ ಇಲಾಖೆ ಕೂಡ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹಾಗೂ ಪ್ರಕರಣ ದಾಖಲಿಸಿ, ಬಂಧಿಸುವುದಾಗಿ ಭರವಸೆ ನೀಡಿದ ಮೇರೆಗೆ ರಸ್ತೆ ತಡೆಯನ್ನು ಹಿಂಪಡೆಯಲಾಯಿತು. ಮಡಿಕೇರಿ ವಿಭಾಗದ ಡಿವೈಎಸ್ಪಿ ಸೂರಜ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನೂರಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವಿವಿಧ ಪೊಲೀಸ್ ಠಾಣೆಗಳಿಂದ ಸಿ.ಐ. ಚಂದ್ರಶೇಖರ್, ಠಾಣಾಧಿಕಾರಿ ಮಂಜುನಾಥ್, ರಾಘವೇಂದ್ರ ,ಶ್ವೇತಾ, ಹಾಗೂ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್ ಆರ್. ಹಾಗೂ ಉಪ ವಲಯ ಅರಣ್ಯ ಅಧಿಕಾರಿಗಳು ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗ ಹಾಜರಿದ್ದರು. ಬೆಳಗಿನಿಂದ ಪ್ರಾರಂಭವಾದ ಪ್ರತಿಭಟನೆಗಳು ಅಪರಾಹ್ನ ೩:೦೦ವರೆಗೂ ಮುಂದುವರೆಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಪಕ್ಷದ ಪ್ರಮುಖರಾದ, ಕುಟ್ಟಂಡ ಅಜಿತ್ ಕರುಂಬಯ್ಯ, ಚಲನ್, ಕೊಲ್ಲಿರ ಧರ್ಮಜಾ, ಕೊಲ್ಲಿರ ಗೋಪಿ ಚಿಣ್ಣಪ್ಪ, ಕಿಲನ್ ಗಣಪತಿ, ಹಾಗೂ ಹಿಂದು ಪರ ಸಂಘಟನೆಯ ಪದಾಧಿಕಾರಿಗಳು ಬಿಜೆಪಿ ಪಕ್ಷದ ಪದಾಧಿಕಾರಿಗಳು ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದರು.

ಪ್ರಕರಣ ದಾಖಲು

ಇತಿಹಾಸ ಪ್ರಸಿದ್ಧ ಪ್ರಾಚೀನ ಕಾಲದ ಗದ್ದಿಗೆ ಬೆಟ್ಟದ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅನ್ಯಕೋಮಿನ ಯಾರೋ ಕಿಡಿಗೇಡಿಗಳು ವಾಹನಗಳಲ್ಲಿ ಆಗಮಿಸಿ ಬಳಿಕ ದೇವಾಲಯದ ಆವರಣದಲ್ಲಿ ಸಮಾಧಿ ರೀತಿಯಲ್ಲಿ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಶ್ರೀ ಸಿದ್ದೇಶ್ವರ ದೇವಾಲಯದ ಆಡಳಿತ ಮಂಡಳಿ ಉಪಾಧ್ಯಕ್ಷ ಸಿ.ಎಂ. ಕಾಳಯ್ಯ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಅರಣ್ಯಾಧಿಕಾರಿಯಿಂದ ಪ್ರಕರಣ ದಾಖಲು

ಮಾಲ್ದಾರೆ ಸಮೀಪದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯದ ಆವರಣಕ್ಕೆ ಅಕ್ರಮ ಪ್ರವೇಶ ಮಾಡಿ ಅನಧಿಕೃತವಾಗಿ ಮೀಸಲು ಅರಣ್ಯ ಪ್ರದೇಶಕ್ಕೆ ಪ್ರವೇಶ ಮಾಡಿದ ಆರೋಪದಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಕುಶಾಲನಗರ ವಲಯ ಅರಣ್ಯ ಅಧಿಕಾರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾನುವಾರದಂದು ಅಕ್ರಮವಾಗಿ ಪ್ರವೇಶ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ತಪ್ಪಿತಸ್ಥ ರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸೋಮವಾರಪೇಟೆ ಎ.ಸಿ.ಎಫ್. ನವೀನ್ ಕುಮಾರ್ ತಿಳಿಸಿದ್ದಾರೆ.