ಮಡಿಕೇರಿ, ಜು.೨೮: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಲಯದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ ೨೦೨೬-೨೭ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ೨ ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ಗೆ ಭರ್ತಿಯಾಗದೇ ಖಾಲಿ ಉಳಿದಿರುವ ೩೧ ಸೀಟುಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) vನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (೪ ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು.

ಪ್ರವೇಶ ಅರ್ಹತೆ: ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ. ೪೫ ಅಂಕಗಳೊAದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-೧ ಅವರುಗಳಿಗೆ ಕನಿಷ್ಟ ಶೇ. ೪೦ ಅಂಕಗಳೊAದಿಗೆ ಉತ್ತೀರ್ಣರಾಗಿರಬೇಕು). ದಿನಾಂಕ: ೦೬-೦೮-೨೦೨೬ ರಂದು ಅಭ್ಯರ್ಥಿಗಳ ವಯಸ್ಸು ೧೯ ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.೫೦ ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ. ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್‌ಸೈಟ್: ತಿತಿತಿ.uಚಿhs.eಜu.iಟಿ ನಲ್ಲಿ ದಿನಾಂಕ: ೨೩-೦೭-೨೦೨೬ ರಿಂದ ೦೬-೦೮-೨೦೨೬ ರವರೆಗೆ ಡೌನ್‌ಲೋಡ್ ಮಾಡಬಹುದು. ಈ ರೀತಿ ವೆಬ್‌ಸೈಟ್ ಮುಖಾಂತರ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ಆಗಸ್ಟ್ ೬ ರೊಳಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ ೫೭೭೪೧೨ ಇಲ್ಲಿಗೆ ಕಳುಹಿಸಿಕೊಡಬೇಕು. ಆಗಸ್ಟ್ ೬ ರ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ರೂ. ೫೦೦, ಪ.ಜಾ./ಪ.ಪಂ./ಪ್ರವರ್ಗ-೧ರವರಿಗೆ ರೂ. ೨೫೦ ಆಗಿದ್ದು, ರಾಷ್ಟಿçÃಕೃತ ಬ್ಯಾಂಕ್‌ಗಳ ಡಿ.ಡಿ.ಯನ್ನು ಅomಠಿಣಡಿoಟಟeಡಿ, ಏSಓUಂಊS, Shivಚಿmoggಚಿ ೫೭೭೪೧೨ ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ ೫೭೭೪೧೨ ಇಲ್ಲಿಗೆ ದಿನಾಂಕ: ೦೬-೦೮-೨೦೨೬ (ಸಂಜೆ ೦೪:೦೦ ಗಂಟೆ) ಒಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು. ದಿನಾಂಕ : ೦೬-೦೮-೨೦೨೬ ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಪ್ರವೇಶ ಮತ್ತು ಆಯ್ಕೆ ವಿಧಾನ: ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ದತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್‌ಸೈಟ್ ಮುಖಾಂತರ ತಿಳಿಸಲಾಗುವುದು.