ಸೋಮವಾರಪೇಟೆ, ಜು.೨೮: ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗಾಗಿ ಕೆರಿಯರ್ ಗೈಡೆನ್ಸ್ ಕಾರ್ಯಕ್ರಮ ಕುವೆಂಪು ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ, ಪ್ಲೇಸ್‌ಮೆಂಟ್ ಸೆಲ್ ಮತ್ತು ಸಿಎಸ್‌ಆರ್ ರಾಜ್ಯ ನೋಡಲ್ ನಿವೃತ್ತ ಅಧಿಕಾರಿ ಪ್ರೊ. ಎ. ನಾರಾಯಣ ಪ್ರಸಾದ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರದ ಉನ್ನತ ಶಿಕ್ಷಣದ ಅವಕಾಶಗಳು, ವಿವಿಧ ವೃತ್ತಿ ಆಯ್ಕೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯಶಸ್ವಿ ವೃತ್ತಿಜೀವನ ರೂಪಿಸಿಕೊಳ್ಳುವ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ಅಧ್ಯಕ್ಷರಾದ ಮಂಜುಳ ಸುಬ್ರಮಣಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲೆಯ ಮುಖ್ಯ ಶಿಕ್ಷಕರಾದ ಮಿಲ್ಡೆçಡ್ ಗೋನ್ಸಾಲ್ವೇಸ್, ಕಾರ್ಯಕ್ರಮದ ಪ್ರಾಜೆಕ್ಟ್ ಡೈರೆಕ್ಟರ್ ಆಗಿ ಬಿ.ಈ. ಅರುಣ್ ಕುಮಾರ್, ಜೆಸಿಐ ಸ್ಥಾಪಕ ಅಧ್ಯಕ್ಷ ತೇಜಸ್ವಿ, ಘಟಕದ ಕಾರ್ಯದರ್ಶಿ ಜ್ಯೋತಿ ರಾಜೇಶ್, ನಿಕಟಪೂರ್ವ ಅಧ್ಯಕ್ಷೆ ಜಗದಾಂಭ ಗುರುಪ್ರಸಾದ್ ಇದ್ದರು.