ಕೂಡಿಗೆ, ಜು. ೨೯: ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲಾ ವಿದ್ಯಾರ್ಥಿಗಳಿಗೆ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರು ಸ್ವೆಟರ್‌ಗಳನ್ನು ವಿತರಣೆ ಮಾಡಿದರು.

ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಆಶಾ ಕಿರಣವಾಗಿರುವ ಮೊರಾರ್ಜಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ಓದುವ ಮೂಲಕ ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲೆ ಭಾರತಿ ವಹಿಸಿ ಶಾಲೆಯ ಪ್ರಗತಿಯ ಬಗ್ಗೆ ವಿವರಿಸಿದರು.

ಈ ಸಂದರ್ಭ ಬಿಜೆಪಿ ಮುಖಂಡ ಹೆರೂರು ಚಂದ್ರಶೇಖರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಇಂದಿರಾ ರಮೇಶ್, ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಟಿ. ಗರೀಶ್, ತಾಲೂಕು ಪಂಚಾಯಿತಿ, ಮಾಜಿ ಸದಸ್ಯ ಗಣೇಶ್, ತಾಲೂಕು ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ದಿನೇಶ್, ವಿವಿಧ ಘಟಕದ ಪದಾಧಿಕಾರಿಗಳಾದ ರವಿ ಪಕ್ಷಿ, ಮಂಜುನಾಥ ಗುರುಲಿಂಗಪ್ಪ, ಕುಮಾರಸ್ವಾಮಿ, ಪ್ರಭಾಕರ್, ಕನಕ, ಪದ್ಮ, ಪ್ರಕಾಶ್, ಪ್ರಭು, ಗುರುಪಾದ ಸ್ವಾಮಿ, ಸುಬ್ಬಯ್ಯ, ಗಣೇಶ್, ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಶಾಲಾ ಶಿಕ್ಷಕರ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು.