ಮಡಿಕೇರಿ, ಜು. ೨೯: ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆಯಾಗಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಶಾಸಕರುಗಳಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಜಿಲ್ಲಾ ಸಮಿತಿಯ ನಾಯಕರುಗಳು ಹಾಗೂ ಬ್ಲಾಕ್ ಅಧ್ಯಕ್ಷರುಗಳೊಂದಿಗೆ ಚರ್ಚಿಸಿ ಫ್ಯಾನ್ಸಿ ಪಾರ್ವತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಿ.ಆರ್. ಪುಷ್ಪಲತಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷೆ ಜಿ.ಆರ್. ಪುಷ್ಪಲತಾ, ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ. ರಮೇಶ್, ನಾಪೋಕ್ಲು ಬ್ಲಾಕ್ ಕಾರ್ಯಾಧ್ಯಕ್ಷ ಶೌಕತ್ ಆಲಿ, ಸಾಮಾಜಿಕ ಜಾಲತಾಣ ಘಟಕದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್ ಮತ್ತಿತರ ಪ್ರಮುಖರು ಫ್ಯಾನ್ಸಿ ಪಾರ್ವತಿ ಅವರಿಗೆ ಆದೇಶ ಪತ್ರ ನೀಡಿದರು.