ಗೋಣಿಕೊಪ್ಪಲು, ಜು.೨೯: ಕಳೆದ ೩೦ ತಿಂಗಳಿನಲ್ಲಿ ಕೇವಲ ೧೨ ಸಾಮಾನ್ಯ ಸಭೆಗಳನ್ನು ಕರೆಯಲಾಗಿದೆ. ಗ್ರಾ.ಪಂ. ಅಧ್ಯಕ್ಷರು ಅಭಿವೃದ್ಧಿ ಕಾರ್ಯದಲ್ಲಿ ಸ್ಪಂದನ ಮಾಡುತ್ತಿಲ್ಲ. ಕಸ ಸಮಸ್ಯೆ ರಸ್ತೆ, ಸಮಸ್ಯೆ ಸೇರಿದಂತೆ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಸದಸ್ಯರ ಮಾತಿಗೆ ಸಭೆಯಲ್ಲಿ ಮನ್ನಣೆ ನೀಡುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಹೊರ ಬಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಅವಧಿಯು ಆಗಸ್ಟ್ ೩ಕ್ಕೆ ಮುಗಿಯಲಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿಯವರ ಅಧ್ಯಕ್ಷತೆಯಲ್ಲಿ ಕೊನೆಯ ಸಾಮಾನ್ಯ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಗೆ ಆಡಳಿತ ಪಕ್ಷದ ಸದಸ್ಯರು ಸೇರಿದಂತೆ ೨೧ ಸದಸ್ಯರು ಆಗಮಿಸಿದ್ದರು. ಸಭೆ ಆರಂಭವಾಗುತ್ತಿದ್ದAತೆಯೇ ಬಿಜೆಪಿ ಬೆಂಬಲಿತ ಸದಸ್ಯರುಗಳಾದ ಕೆ.ರಾಜೇಶ್, ರಾಮಕೃಷ್ಣ, ಸೌಮ್ಯಬಾಲು, ಬೋಜಮ್ಮ ಗ್ರಾ.ಪಂ. ಅಧ್ಯಕ್ಷರ ಏಕಪಕ್ಷೀಯ ನಿರ್ಧಾರದ ಬಗ್ಗೆ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಈ ವೇಳೆ ಸಭೆ ಕೆಲ ಕಾಲ ಗೊಂದಲದ ವಾತಾವರಣವಾಗಿತ್ತು. ನಂತರ ಬಿಜೆಪಿಯ ಸದಸ್ಯರುಗಳು ತಮ್ಮ ಅಸÀಮಾಧಾನವನ್ನು ಹೊರಹಾಕುವ ಮೂಲಕ ಸಾಮೂಹಿಕವಾಗಿ ಸಭೆಯನ್ನು ಬಹಿಷ್ಕರಿಸಿ ಹೊರ ನಡೆದರು.

ಪಂಚಾಯಿತಿಯ ಹೊರಾಂ ಗಣದಲ್ಲಿ ಮಾಧ್ಯಮದೊಂದಿಗೆ ಬಿಜೆಪಿ ಬೆಂಬಲಿತ ಸದಸ್ಯರುಗಳಾದ ಕೊಣಿಯಂಡ ಬೋಜಮ್ಮ, ರಾಮಕೃಷ್ಣ, ಚೈತ್ರ ಬಿ. ಚೇತನ್ ಹಾಗೂ ಸೌಮ್ಯಬಾಲು ಮಾತನಾಡಿ, ವಾಣಿಜ್ಯ ನಗರ ಗೋಣಿಕೊಪ್ಪಲುವಿನ ಅಭಿವೃದ್ಧಿ ಕಾರ್ಯಗಳು ಮೊಟಕುಗೊಂಡಿವೆ. ಕಸ ಸಮಸ್ಯೆ ವಿಚಾರದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯ ಬದಿಯಲ್ಲಿಯೇ ರಾಶಿ ರಾಶಿ ಕಸಗಳನ್ನು ಸುರಿದಿದ್ದಾರೆ. ಕಸ ಸಮಸ್ಯೆ ನಿರ್ವಹಣೆಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ; ಸಭೆಯಲ್ಲಿ ಸಾಕಷ್ಟು ವಿರೋಧ ವ್ಯಕ್ತಪಡಿಸಿದರೂ ಅಗತ್ಯವಿರುವ ಕಡೆಗಳಲ್ಲಿ ರಸ್ತೆ ನಿರ್ಮಾಣ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಕಾರ್ಯ ನಡೆದಿಲ್ಲ. ಇರುವ ರಸ್ತೆಗಳಿಗೆ ಅಭಿವೃದ್ಧಿ ಮಾಡಿಲ್ಲ ಎಂದು ಆರೋಪಿಸಿದರು.

ಗೋಣಿಕೊಪ್ಪ ಬಸ್ ನಿಲ್ದಾಣ ಉದ್ಘಾಟನೆಯ ವಿಚಾರದಲ್ಲಿ ಸದಸ್ಯರನ್ನು ಗಣನೆಗೆ ತೆಗೆದುಕೊಳ್ಳದೆ, ಸಾಮಾನ್ಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳದೆ ಏಕಾಏಕಿ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ್ದಾರೆ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳುವ ಆಸನದ ವ್ಯವಸ್ಥೆ ಇನ್ನೂ ಕೂಡ ಆಗಿಲ್ಲ. ಶೌಚಾಲಯವನ್ನು ಸಾರ್ವಜನಿಕರ ಉಪಯೋಗಕ್ಕೆ ಒದಗಿಸಿರುವುದಿಲ್ಲ ವಿದ್ಯುಚ್ಛಕ್ತಿ ಅಳವಡಿಸಿರುವುದಿಲ್ಲ.

ಈ ಬಗ್ಗೆ ಪ್ರಶ್ನಿಸಿದರೆ ಅಧ್ಯಕ್ಷರು ಹಾರಿಕೆಯ ಉತ್ತರಗಳನ್ನು ನೀಡುತ್ತಾ ಬಂದಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಸಾಕಷ್ಟು ಅಧ್ಯಕ್ಷರನ್ನು ಈ ಪಂಚಾಯಿತಿ ಕಂಡಿದೆ. ಆದರೆ ಪ್ರಸ್ತುತ ಅಧ್ಯಕ್ಷರ ಏಕಪಕ್ಷೀಯ ನಿರ್ಧಾರದಿಂದ ಗೊಣಿಕೊಪ್ಪದ ಅಭಿವೃದ್ಧಿ ಕಾರ್ಯಗಳು ನಿರೀಕ್ಷೆಯ ಮಟ್ಟದಲ್ಲಿ ನಡೆದಿಲ್ಲ.

ಹೀಗಾಗಿ ಸಭೆಯಲ್ಲಿ ಯಾವುದೇ ವಿಚಾರ ಪ್ರಸ್ತಾಪಿಸಿದರೂ ಅನುಷ್ಠಾನಕ್ಕೆ ಬರುತ್ತಿಲ್ಲ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರ ನಡುವೆ ಉತ್ತಮ ಬಾಂಧವ್ಯ ಇಲ್ಲದಿರುವುದು ಕೂಡ ಆಡಳಿತ ವ್ಯವಸ್ಥೆಗೆ ಹಿನ್ನಡೆಯಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸದಸ್ಯರ ಮಾತಿಗೆ ಮನ್ನಣೆ ನೀಡುತ್ತಿದ್ದಾರೆ. ಆದರೆ ಅಧ್ಯಕ್ಷರು ಸ್ಪಂದಿಸದೆ ಇರುವುದರಿಂದ ಸಮಸ್ಯೆಗಳು ಸಮಸ್ಯೆಯಾಗಿಯೇ ಉಳಿದಿವೆ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಸಭೆಯನ್ನು ಬಹಿಷ್ಕರಿಸಿ ಹೊರ ಬಂದಿದ್ದೇವೆ ಎಂದು ತಮ್ಮ ಅಸಹಾಯಕತೆಯನ್ನು ಮಾಧ್ಯಮದ ಮುಂದೆ ತೋಡಿಕೊಂಡರು. ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಹಕೀಂ, ಪುಷ್ಪ, ವಿವೇಕ್, ಗೀತಾ, ನೂರೆರ ರತಿ, ಕೆ. ರಾಜೇಶ್, ಉಪಸ್ಥಿತರಿದ್ದರು.

-ಹೆಚ್.ಕೆ. ಜಗದೀಶ್