ಕುಶಾಲನಗರ, ಜು. ೨೯: ಕುಶಾಲನಗರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಪುರಸಭೆ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ನಡೆಯಿತು

ಸಭೆಯಲ್ಲಿ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಲಾಯಿತು. ಕಳೆದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಅನುಪಾಲನಾ ವರದಿ ಹಾಗೂ ವಿವಿಧ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗೃಹಲಕ್ಷಿö್ಮ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುತ್ತಿರುವ ಪ್ರಕರಣಗಳ ಕುರಿತು ಚರ್ಚೆ ನಡೆಸಿ, ಇಂತಹ ಪ್ರಕರಣಗಳಲ್ಲಿ ಜಮೆಯಾದ ಹಣವನ್ನು ಸರ್ಕಾರಕ್ಕೆ ಹಿಂದಿರುಗಿಸಿ ಅದರ ವಿವರವನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಸಿದ್ದಾಪುರ-ಬೆಂಗಳೂರು ನಡುವೆ ರಾತ್ರಿ ಬಸ್ ಸೇವೆ ಆರಂಭಿಸುವ ಕುರಿತು ಹಾಗೂ ಕುಶಾಲನಗರದಲ್ಲಿ ನಿರ್ಮಾಣವಾಗುತ್ತಿರುವ ನೂತನ ಬಸ್ ಡಿಪೋದ ಕಾಮಗಾರಿ ಪ್ರಗತಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಸಭೆಯಲ್ಲಿ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಅಧ್ಯಕ್ಷ ವಿ.ಪಿ. ಶಶಿಧರ್ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಸಮೀಕ್ಷೆ ಕುರಿತು ಸೆಸ್ಕಾಂ ಅಧಿಕಾರಿಗಳಿಂದ ಮಾಹಿತಿ ಪಡೆದು ಯೋಜನೆಗಳ ಅನುಷ್ಠಾನದ ಸ್ಥಿತಿಗತಿಯನ್ನು ಪರಿಶೀಲಿಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಸಿ. ಅಪ್ಪಣ್ಣ, ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ಕೆ.ಸಿ. ಶಶಿ ಭೀಮಯ್ಯ, ಜಿಲ್ಲಾ ಸದಸ್ಯ ಅಣ್ಣಯ್ಯ ಹಾಗೂ ತಾಲೂಕು ಸದಸ್ಯರಾದ ಕೃಷ್ಣೇಗೌಡ, ಬಿ.ಸಿ. ಮಲ್ಲಿಕಾರ್ಜುನ, ಕೆ.ಇ. ಅಬ್ದುಲ್ ರಜಾಕ್, ಫಿಲೋಮಿನಾ, ಹೆಚ್.ಎನ್. ರಾಜಶೇಖರ್, ಎಸ್.ಎನ್. ವಿವೇಕಾನಂದ, ಎಸ್.ಎ. ಶ್ರೀನಿವಾಸ್, ಯು.ಎಂ. ಕಿಶೋರ್, ಹೆಚ್.ಯು. ರಫೀಕ್ S Áನ್, ಎನ್. ಶ್ರೀನಿವಾಸ್ ಕುಮಾರ್, ಎಂ.ಎ. ಆದಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.