ಕುಶಾಲನಗರ, ಜು. ೩೦: ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪ್ರತಿಮೆ ನಿರ್ಮಾಣಕ್ಕೆ ಸಂಬAಧಿಸಿದ ಶಿಲಾನ್ಯಾಸ ಕಾರ್ಯಕ್ರಮವನ್ನು ಆಗಸ್ಟ್ ೨೨ ರಂದು ನಡೆಸಲು ತೀರ್ಮಾನಿಸಲಾಗಿದೆ.
ಈ ಕುರಿತು ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳ ಸಭೆ ನಡೆಯಿತು. ಆಗಸ್ಟ್ ೨೨ರಂದು ಗುಂಡೂರಾವ್ ಅವರ ಪುಣ್ಯಸ್ಮರಣೆ ದಿನವಾಗಿದ್ದು, ಅಂದು ಕುಶಾಲನಗರ ಪುರಸಭೆ ಆವರಣದಲ್ಲಿ ನಿರ್ಮಿಸಲಾಗುವ ಪ್ರತಿಮೆಯ ಶಿಲಾನ್ಯಾಸ ನೆರವೇರಿಸಲು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಪ್ರತಿಮೆಯ ವಿನ್ಯಾಸ ಹಾಗೂ ರೂಪರೇಷೆಗಳ ಕುರಿತು ಇಂಜಿನಿಯರ್ ಅರ್ಬಸ್ ಅಹಮದ್ ಸಮಗ್ರ ಮಾಹಿತಿ ನೀಡಿದರು. ಪ್ರತಿಮೆ ನಿರ್ಮಾಣಕ್ಕೆ ಅಗತ್ಯವಿರುವ ವೆಚ್ಚದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಗುಂಡೂರಾವ್ ಅವರ ಪುತ್ರ ಹಾಗೂ ಮಾಜಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಅವರ ಸಹಕಾರ ದೊರೆಯಲಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ತಿಳಿಸಿದರು.
ಉಳಿದ ವೆಚ್ಚವನ್ನು ಸ್ಥಳೀಯ ಸಂಘ-ಸAಸ್ಥೆಗಳು ಹಾಗೂ ಗುಂಡೂರಾವ್ ಅವರ ಅಭಿಮಾನಿಗಳಿಂದ ದೇಣಿಗೆ ಸಂಗ್ರಹಿಸುವ ಮೂಲಕ ಭರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರತಿಮೆ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷರಾಗಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಹಾಗೂ ಸಂಚಾಲಕರಾಗಿ ಪುರಸಭೆ ಮುಖ್ಯಾಧಿಕಾರಿ ಟಿ.ಎಸ್. ಗಿರೀಶ್ ಅವರ ನೇತೃತ್ವದಲ್ಲಿ ಮುಂದಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಭೆ ಸರ್ವಾನುಮತದಿಂದ ನಿರ್ಧರಿಸಿತು. ಸಭೆಯಲ್ಲಿ ಗುಂಡೂರಾವ್ ಅವರ ಆಪ್ತ ಒಡನಾಡಿಯಾಗಿದ್ದ ನಿವೃತ್ತ ಶಿಕ್ಷಕ ಎಂ.ಹೆಚ್. ನಜೀರ್ ಅಹ್ಮದ್ ಅವರು ತಮ್ಮ ನೆನಪುಗಳನ್ನು ಹಂಚಿಕೊAಡರು.
ಪುರಸಭೆ ಮುಖ್ಯಾಧಿಕಾರಿ ಟಿ.ಎಸ್. ಗಿರೀಶ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಗುಂಡೂರಾವ್ ಅವರ ಆಪ್ತ ಸಹಾಯಕರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದ ಎಂ.ಎಚ್. ಫಜಲುಲ್ಲಾ, ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು, ಗುಂಡೂರಾವ್ ಅಭಿಮಾನಿಗಳು, ಪುರಸಭೆಯ ಹಿರಿಯ ಆರೋಗ್ಯ ಅಧಿಕಾರಿ ಉದಯಕುಮಾರ್ ಸೇರಿದಂತೆ ಹಲವರು ಸಭೆಯಲ್ಲಿ ಉಪಸ್ಥಿತರಿದ್ದರು.