ಮಡಿಕೇರಿ, ಜು. ೩೦: ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರಿಗೆ ಶಿವಶರಣ ಹಡಪದ ಅಪ್ಪಣ್ಣ ಅವರು ಆತ್ಮೀಯರಾಗಿ, ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದು ಉಪನ್ಯಾಸಕಿ ಹಾಗೂ ಸಾಹಿತಿ ಕೆ.ಜಯಲಕ್ಷಿö್ಮ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶರಣರು ೧೨ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಆ ನಿಟ್ಟಿನಲ್ಲಿ ಬಸವಣ್ಣನವರ ಜೊತೆಗೂಡಿ ಹಡಪದ ಅಪ್ಪಣ್ಣ ಅವರು ಸಮಾಜ ಸುಧಾರಣೆಗೆ ಪ್ರಯತ್ನಿಸಿದ್ದಾರೆ. ಹಡಪದ ಅಪ್ಪಣ್ಣ ಅವರು ೧೨ನೇ ಶತಮಾನದಲ್ಲಿ ಧಾರ್ಮಿಕ, ಸಾಮಾಜಿಕವಾಗಿ ಎಲ್ಲರನ್ನು ಮೇಲೆತ್ತುವಲ್ಲಿ ಶ್ರಮಿಸಿದ್ದಾರೆ. ಎಲ್ಲರಿಗೂ ಸಮಾನತೆ ಕಲ್ಪಿಸಲು ಶ್ರಮಿಸಿದ್ದಾರೆ. ಕಂದಾಚಾರವನ್ನು ಗಟ್ಟಿಯಾಗಿ ಪ್ರಶ್ನಿಸುವ ಮೂಲಕ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು.

ಹಡಪ ಎಂದರೆ ಚೀಲ ಎಂದರ್ಥ, ಕಾಯಕವೇ ಕೈಲಾಸ ಎಂಬAತೆ ಚೀಲದಲ್ಲಿ ಉಪಕರಣ ಇಟ್ಟುಕೊಂಡು ವೃತ್ತಿ ನಡೆಸಿಕೊಂಡು ಹೋಗುತ್ತಿದ್ದರು. ಅನುಭವ ಮಂಟಪದಲ್ಲಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಬಲಗೈ ಬಂಟನAತಿದ್ದು ಹಡಪದ ಅಪ್ಪಣ್ಣ ಅವರು ಕಾರ್ಯನಿರ್ವಹಿಸಿದ್ದಾರೆ ಎಂದರು.

ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೆ.ಎಸ್. ದೊರೇಶ್ ಮಾತನಾಡಿ, ೧೨ನೇ ಶತಮಾನದಲ್ಲಿ ಬಸವಣ್ಣನವರ ಜೊತೆ ಎಲ್ಲಾ ಸಮಾಜದವರು ಸೇರಿ ಸಾಮಾಜಿಕ ಕ್ರಾಂತಿಯನ್ನು ಉಂಟು ಮಾಡಿದರು. ಸಮಸಮಾಜ ನಿರ್ಮಾಣಕ್ಕೆ ಎಲ್ಲಾ ವಚನಕಾರರು ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಸವಿತಾ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಎಂ.ಟಿ. ಮಧು ಮಾತನಾಡಿ, ಹಡಪದ ಅಪ್ಪಣ್ಣ ಅವರು ಮೌಢ್ಯತೆ ಮತ್ತು ಕಂದಾಚಾರ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಮಾತನಾಡಿದರು. ಮಡಿಕೇರಿ ತಾಲೂಕು ಸವಿತಾ ಸಮಾಜ ಮಹಿಳಾ ಘಟಕದ ಅಧ್ಯಕ್ಷೆ ವಸಂತಿ ಆರ್.ಬಿ, ಶಿರಸ್ತೇದಾರ ದೇವರಾಜು, ಪ್ರಮುಖರಾದ ಸಂದೇಶ್ ಟಿ.ಜಿ., ಅವಿನಾಶ್ ಬೊಟ್ಲಪ್ಪ, ಇತರರು ಇದ್ದರು.