ಶನಿವಾರಸಂತೆ, ಜು. ೩೧: ಕಾನೂನು-ನಿಯಮಗಳನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಶನಿವಾರಸಂತೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಜಿ. ಕೃಷ್ಣರಾಜ್ ಹೇಳಿದರು.

ಪಟ್ಟಣದಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೆöÊವರ್ಸ್ ಟ್ರೇಡ್ ಯೂನಿಯನ್ ಸೋಮವಾರಪೇಟೆ ತಾಲೂಕು ಸಮಿತಿ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಸಪ್ತಾಹ ಹಾಗೂ ಅಪರಾಧ ತಡೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೆಲವು ವಾಹನ ಹಾಗೂ ಆಟೋ ಚಾಲಕರು ಮಾದಕ ವಸ್ತುಗಳ ಸೇವನೆ ಅಥವಾ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಇಂತಹವರ ವಿರುದ್ಧ ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಟ್ಯಾಕ್ಸಿ ಚಾಲಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿನ್ಸೆಂಟ್ ಬಾಬು ಮಾತನಾಡಿ, ಕರ್ನಾಟಕ ಟ್ಯಾಕ್ಸಿ ಡ್ರೆöÊವರ್ಸ್ ಟ್ರೇಡ್ ಯೂನಿಯನ್ ಏಳು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಚಾಲಕರಿಗೆ ಅಪಘಾತ ಅಥವಾ ಇತರ ಸಮಸ್ಯೆಗಳು ಎದುರಾದಾಗ ಸಂಘದಿAದ ಅಗತ್ಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಂಘದ ಖಜಾಂಚಿ ದೀಪಕ್ ಮಾತನಾಡಿ, ವೈಟ್ ಬೋರ್ಡ್ ವಾಹನಗಳ ಅಕ್ರಮ ವಾಣಿಜ್ಯ ಚಟುವಟಿಕೆಯಿಂದ ಯೆಲ್ಲೋ ಬೋರ್ಡ್ ವಾಹನ ಚಾಲಕರ ಜೀವನೋಪಾಯಕ್ಕೆ ತೊಂದರೆಯಾಗುತ್ತಿದೆ. ಇಂತಹ ವಾಹನಗಳ ವಿರುದ್ಧ ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆರ್‌ಟಿಒ ಅಧಿಕಾರಿ ಪ್ರದೀಪ್, ಕೊಡಗು ಜಿಲ್ಲೆಯಲ್ಲಿ ಈಗಾಗಲೇ ನಿಯಮ ಉಲ್ಲಂಘಿಸಿದ ವೈಟ್ ಬೋರ್ಡ್ ವಾಹನಗಳ ವಿರುದ್ಧ ಪರಿಶೀಲನೆ ನಡೆಸಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಂದಿನ ದಿನಗಳಲ್ಲಿ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಭಾಗಗಳಲ್ಲೂ ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಸಂಘದ ಅಧ್ಯಕ್ಷ ವಸಂತ್ ಆಚಾರ್ಯ, ಪದಾಧಿಕಾರಿಗಳಾದ ಪರಶುರಾಮ್, ಪ್ರದೀಪ್ ಚಾಮೇರ, ಡೆನ್ನಿಸ್, ಕೃಷ್ಣಮಣಿ, ಹೇಮಂತ್, ಪ್ರಕಾಶ್ ಪಟ್ಟು, ಸಂತು ಕಾರ್ಯಪ್ಪ ಉಪಸ್ಥಿತರಿದ್ದರು.