ಗೋಣಿಕೊಪ್ಪ, ಜು. ೩೧: ಸಾಯಿ ಶಂಕರ್ ವಿದ್ಯಾಸಂಸ್ಥೆ, ಪ್ರಶಾಂತಿ ನಿಲಯದಲ್ಲಿ ಗುರುಪೂರ್ಣಿಮೆ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಾಯಿ ಶಂಕರ್ ಸಂಸ್ಥೆಯ ಅಧ್ಯಕ್ಷ ಝರು ಗಣಪತಿ, ಟ್ರಸ್ಟಿಗಳಾದ ಗಾನ ಕಾರ್ಯಪ್ಪ, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಝರು ಗಣಪತಿ, ಗುರುಪೂರ್ಣಿಮೆಯ ಮಹತ್ವವನ್ನು ವಿವರಿಸುತ್ತಾ, ಗುರುಗಳ ಜೊತೆಗೆ ತಾಯಿ-ತಂದೆಯರ ಪಾತ್ರವೂ ನಮ್ಮ ಜೀವನದಲ್ಲಿ ಅತ್ಯಂತ ಮಹತ್ವದ್ದೆಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಟ್ರಸ್ಟಿಗಳಾದ ಗಾನ ಕಾರ್ಯಪ್ಪ ಗುರುಪೂರ್ಣಿಮೆಯನ್ನು ಏಕೆ ಆಚರಿಸಬೇಕು ಮತ್ತು ಅದರ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡುವ ಮೂಲಕ ತಮ್ಮ ಗುರುಗಳಿಗೆ ಗೌರವ ಸಲ್ಲಿಸಿದರು. ಗುರುಗಳಿಗೆ ಹೂವಿನ ಮೂಲಕ ಕೃತಜ್ಞತೆ ಅರ್ಪಿಸಿದ ಕ್ಷಣವು ಎಲ್ಲರ ಮನಸ್ಸನ್ನು ಸ್ಪರ್ಶಿಸಿತು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.