ಮಡಿಕೇರಿ, ಜು. ೩೧: ಕೊಡಗು ಪತ್ರಕರ್ತರ ಸಂಘದ ಪೊನ್ನಂಪೇಟೆ ತಾಲೂಕು ಘಟಕ, ವಿಸ್ತರಣ ಶಿಕ್ಷಣ ಘಟಕ ಮಡಿಕೇರಿ ಹಾಗೂ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ಸಹಯೋಗದೊಂದಿಗೆ ಪತ್ರಕರ್ತರಿಗಾಗಿ ಕೆಸರುಗದ್ದೆ ಕ್ರಿಡಾಕೂಟ ಏರ್ಪಡಿಸಲಾಗಿದ್ದು, ತಾ. ೧ ರಂದು (ಇಂದು) ನಡೆಯಲಿದೆ.

ಬೆಳಿಗ್ಗೆ ೧೦ ಗಂಟೆಗೆ ಪೊನ್ನಂಪೇಟೆ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಘಟಕದ ಕ್ಷೇತ್ರ ಅಧೀಕ್ಷಕ ಡಾ. ಜೆ. ಪ್ರಶಾಂತ್ ಉದ್ಘಾಟನೆ ಮಾಡುವರು. ಮಧ್ಯಾಹ್ನ ೨ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಪತ್ರಕರ್ತರ ಸಂಘದ ಪೊನ್ನಂಪೇಟೆ ಘಟಕದ ಅಧ್ಯಕ್ಷ ಕಿರಿಯಮಾಡ ರಾಜ್ ಕುಶಾಲಪ್ಪ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಎಚ್.ಟಿ., ಬಿರುನಾಣಿ ಸಹಕಾರ ಸಂಘದ ಅಧ್ಯಕ್ಷ ನೆಲ್ಲಿರ ಚಲನ್, ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ. ರವಿಕುಮಾರ್, ಪತ್ರಿಕಾ ಭವನ ಮ್ಯಾನೇಜಿಂಗ್ ಟ್ರಸ್ಟಿ ಕೇಶವ ಕಾಮತ್, ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಟಿ.ಪಿ. ರಮೇಶ್, ಬಿ.ಜಿ. ಅನಂತಶಯನ, ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ. ಮುರಳೀಧರ್, ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥ ಡಾ. ಆರ್. ಕೆಂಚಾರೆಡ್ಡಿ ಪಾಲ್ಗೊಳ್ಲಲಿದ್ದಾರೆ ಎಂದು ಸಂಘದ ಪೊನ್ನಂಪೇಟೆ ಘಟಕದ ಕಾರ್ಯದರ್ಶಿ ವಿನೋದ್ ಮೂಡಗದ್ದೆ ತಿಳಿಸಿದ್ದಾರೆ.