ಚೆಯ್ಯಂಡಾಣೆ, ಜು. ೩೧: ಚಾಲಕನ ನಿಯಂತ್ರಣ ತಪ್ಪಿದ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ರಸ್ತೆ ಬದಿಯ ತೋಡಿಗೆ ವಾಲಿದ ಘಟನೆ ನಾಪೋಕ್ಲು-ಮೂರ್ನಾಡು ಮುಖ್ಯರಸ್ತೆಯ ಬೊಳಿಬಾಣೆ ಬಳಿ ನಡೆದಿದೆ.

ಕರಿಕೆಯಿಂದ ಭಾಗಮಂಡಲ, ನಾಪೋಕ್ಲು ಮಾರ್ಗವಾಗಿ ಮಡಿಕೇರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಬೊಳಿಬಾಣೆ ಸಮೀಪ ಹಿಂಬದಿಯಿAದ ಬಂದ ವಾಹನಕ್ಕೆ ದಾರಿ ನೀಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ವಾಲಿ ನಿಂತಿದೆ.

ಅವಘಡದ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಸಾರ್ವಜನಿಕರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತಂದು ನೆರವು ನೀಡಿದರು. ಘಟನೆಯಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾದರೂ, ಬಳಿಕ ಪರಿಸ್ಥಿತಿ ಸಹಜಗೊಂಡಿತು.