ಸುಂಟಿಕೊಪ್ಪ, ಆ. ೧: ಲಕ್ಷಾಂತರ ರೂಪಾಯಿ ಸರ್ಕಾರಿ ಅನುದಾನವನ್ನು ವ್ಯಯಿಸಿ ನಿರ್ಮಿಸಲಾದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸ ವಿಲೇವಾರಿ ಘಟಕವು ಸಮರ್ಪಕವಾಗಿ ನಿರ್ವಹಣೆ ಇಲ್ಲದೆ ಶ್ವಾನಗಳ ಅವಾಸಸ್ಥಾನವಾಗಿ ಮಾರ್ಪಟ್ಟಿದ್ದು, ಈ ಭಾಗದ ನಿವಾಸಿಗಳಿಗೆ ಸಾಂಕ್ರಾಮಿಕ ರೋಗ ಬಾಧಿಸುವ ಅಪಾಯ ಎದುರಾಗಿದೆ.

ಆಹಾರ ಅರಸಿ ಬರುವ ಬೀದಿ ನಾಯಿಗಳು ಕಸ ವಿಲೇವಾರಿ ಘಟಕದಲ್ಲಿ ಬೀಡುಬಿಟ್ಟಿವೆ. ಕಸ ವಿಲೇವಾರಿ ಘಟಕದ ಸುತ್ತ ಭದ್ರವಾದ ಆವರಣ ಗೋಡೆ ನಿರ್ಮಿಸಿ, ವೈಜ್ಞಾನಿಕ ರೀತಿಯಲ್ಲಿ ಕಸದ ನಿರ್ವಹಣೆ ಮಾಡಿದರೆ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಸಾರ್ವಜನಿಕ ಆಸ್ತಿಯನ್ನು ಸಮರ್ಪಕವಾಗಿ ಬಳಸದೇ ನಿರ್ಲಕ್ಷö್ಯ ವಹಿಸಿರುವುದು ವಿಷಾದನೀಯ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಂಬAಧಪಟ್ಟ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಸಂಬAಧಿತ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.