ಕುಶಾಲನಗರ, ಆ. ೧: ನೀಟ್ ಪರೀಕ್ಷೆ ವಿವಾದದಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಕೊಡಗು ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕುಶಾಲನಗರದ ಪ್ರಮುಖ ಬೀದಿಯಲ್ಲಿ ಕ್ಯಾಂಡಲ್ ಲೈಟ್ ಮಾರ್ಚ್ ನಡೆಸಲಾಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಸೇರಿದಂತೆ ಪ್ರಮುಖರು ಮೊಂಬತ್ತಿ ಬೆಳಗಿ ಅಗಲಿದ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎನ್.ಎಸ್.ಯು.ಐ ರಾಜ್ಯ ಉಪಾಧ್ಯಕ್ಷ ರಫೀಕ್ ಅಲಿ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ್, ಯುವ ಕಾಂಗ್ರೆಸ್ ಮುಖಂಡ ತ್ರಿನೇಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭಾ ಮಾಜಿ ಸದಸ್ಯರಾದ ಶಿವಶಂಕರ್, ಎಂ.ಎA.ಪ್ರಕಾಶ್, ಕುಶಾಲನಗರ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಚಿರಂಜೀವಿ, ಪ್ರಮುಖರಾದ ಅಜ್ಜಳ್ಳಿ ರವಿ, ಕಿಸಾನ್ ಘಟಕದ ನಗರ ಅಧ್ಯಕ್ಷ ಹರೀಶ್, ವಿಜಯ್ ಸಿದ್ದು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.