ಮಡಿಕೇರಿ, ಆ. ೩: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ೨೦೨೬-೨೭ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೊಟೇಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಒದಗಿಸಲಾಗುವುದು.

ಈ ಯೋಜನೆಯ ಅಡಿಯಲ್ಲಿ ಕನಿಷ್ಟ ರೂ. ೧ ಲಕ್ಷ ಹಾಗೂ ಗರಿಷ್ಠ ರೂ.೨ ಲಕ್ಷಗಳ ಸಾಲ ಸಹಾಯಧನ ನೀಡಲಾಗಿರುತ್ತದೆ. ಇದರಲ್ಲಿ ಶೇ. ೨೦ ಸಬ್ಸಿಡಿಯನ್ನು ನೀಡಲಾಗಿರುತ್ತದೆ. ಉಳಿಕೆ ಶೇ. ೮೦ ಸಾಲದ ಮೊತ್ತಕ್ಕೆ ಶೇ. ೪ ರಷ್ಟು ಬಡ್ಡಿಯಂತೆ ಒಟ್ಟು ೩೪ ಕಂತುಗಳಲ್ಲಿ ಸಾಲ ಮರು ಪಾವತಿಸಬೇಕಾಗಿದೆ.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇWS ಪ್ರಮಾಣ ಪತ್ರ) ಹೊಂದಿರಬೇಕು. ಅರ್ಜಿದಾರರು ೧೮ ರಿಂದ ೬೫ ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಿAದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಸಾಲದ ಉದ್ದೇಶವನ್ನು ೧೦ ಪದಗಳಿಗಿಂತ ಕಡಿಮೆ ಇಲ್ಲದಂತೆ, ಸ್ಪಷ್ಟವಾಗಿ ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅರ್ಜಿದಾರರ ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ (ಎನ್‌ಪಿಸಿಐ ರಡಿ) ಸೀಡ್ ಆಗಿರಬೇಕು. ಮಹಿಳೆಯರಿಗೆ ಶೇ. ೩೩ ಹಾಗೂ ವಿಶೇಷಚೇತನರಿಗೆ ಶೇ. ೫ ಮೀಸಲಾತಿಯನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ. ವೆಬ್‌ಸೈಟ್: ಞsbಜb.ಞಚಿಡಿಟಿಚಿಣಚಿಞಚಿ.gov.iಟಿ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ ಸಹಾಯವಾಣಿ: ೮೭೬೨೨೪೯೨೩೦ ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.