ನಾಪೋಕ್ಲು, ಆ. ೪: ಸಮುದಾಯದ ಮಕ್ಕಳಿಗೆ ಭಾಷೆ ಹಾಗೂ ಪಾರಂಪರಿಕ ಸಂಪ್ರದಾಯಗಳನ್ನು ತಿಳಿಸುವ ಕೆಲಸ ಆಗಬೇಕಿದೆ ಎಂದು ಲೇಖಕಿ ಅಖಿಲ ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಐಚಂಡ ರಶ್ಮಿ ಪೂವಮ್ಮ ಹೇಳಿದರು.

ಇಲ್ಲಿನ ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಕೊಡವ ಸಮಾಜದ ಹರದಾಸ ಅಪ್ಪ ನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಪೊಮ್ಮಕ್ಕಡ ಪರಿಷತ್ ನಾಪೋಕ್ಲು ವತಿಯಿಂದ ಆಯೋಜಿಸಲಾಗಿದ್ದ ಕಕ್ಕಡ ತೀನಿ ನಮ್ಮೆ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊಡವ ಜನಾಂಗ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು.ಆಗಷ್ಟೇ ಜನಾಂಗದ ಅಭಿವೃದ್ಧಿ ಸಾಧ್ಯ. ಸಂಸ್ಕೃತಿ, ಆಚಾರ, ವಿಚಾರಗಳನ್ನು ಯುವ ಜನಾಂಗ ರೂಢಿಸಿಕೊಳ್ಳಬೇಕು ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಅಲ್ಲಾರಂಡ ಬೀನಾ ಬೊಳ್ಳಮ್ಮ ತಿನಿಸುಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ ಮೊದಲು ನಾವು ಆತ್ಮವಿಶ್ವಾಸ ಬೆಳೆಸಿಕೊಂಡು ಬಳಿಕ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು. ಮಕ್ಕಳಿಗೆ ಕೊಡವ ಪದ್ಧತಿ ಪರಂಪರೆ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ನೀಡಬೇಕು ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಷ್ಟ್ರಪ್ರಶಸ್ತಿ ವಿಜೇತೆÀ ಮುಕ್ಕಾಟಿರ ಸೌಮ್ಯ ತಮ್ಮ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಪರಿಷತ್ ಕಾರ್ಯ ಶ್ಲಾಘನೀಯ ಎಂದರು .

ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ ಮಾತನಾಡಿ ಕೊಡವ ಜನಾಂಗದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾದದ್ದು ಎಂದರು. ಕೊಡವಡ ಮಾಲ್‌ಮಟ ಎಂಬ ವಿಷಯದ ಕುರಿತು ಬಿದ್ದಾಟಂಡ ಮಮತಾ ಚಿಣ್ಣಪ್ಪ ವಿಚಾರ ಮಂಡಿಸಿದರು.

ಕೊಡವ ಸಮಾಜ ಮೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಶಾ ಮೇದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಅರೆಯಡ ಸರಸು ಪೆಮ್ಮಯ್ಯ ಪ್ರಾರ್ಥಿಸಿ ನಾಯಕಂಡ ಜೂಬಿ ತಿಮ್ಮಯ್ಯ ಸ್ವಾಗತಿಸಿದರು. ಕಲಿಯಂಡ ಗೀತಾ ಗಿರೀಶ್ ವಂದಿಸಿದರು. ಕೊಡವ ಸಮಾಜ ಹಾಗೂ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.