ಕುಶಾಲನಗರ, ಆ. ೪: ಗೂಡ್ಸ್ ಆಟೋವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬೈಲುಕುಪ್ಪೆ ಪೊಲೀಸರು ವಶಪಡಿಸಿಕೊಂಡು ಕ್ರಮ ಕೈಗೊಂಡಿದ್ದಾರೆ. ಪಿರಿಯಾಪಟ್ಟಣದಿಂದ ಬೈಲುಕುಪ್ಪೆ ದೊಡ್ಡ ಹೊಸೂರು ಕಡೆಗೆ ಸಾಗಿಸುತ್ತಿದ್ದ ಬಗ್ಗೆ ಸ್ಥಳೀಯರ ಮಾಹಿತಿ ಹಿನ್ನೆಲೆಯಲ್ಲಿ ಬೈಲುಕುಪ್ಪೆ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹಸುಗಳನ್ನು ಮೈಸೂರಿನ ಪಿಂಜರಾ ಪೋಲ್‌ಗೆ ಹಸ್ತಾಂತರಿಸಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.