ಸಿದ್ದಾಪುರ, ಆ. ೪: ಕಾಡಾನೆಗಳನ್ನು ಕಾಡಿಗಟ್ಟುವ ಸಂದರ್ಭ ಕಾಡಾನೆಗಳು ಕಾರ್ಯಾಚರಣೆ ತಂಡವನ್ನೇ ಬೆನ್ನಟ್ಟಿದ ಘಟನೆ ಸಮೀಪದ ಗುಹ್ಯ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ವೀರಾಜಪೇಟೆಯ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಅಮ್ಮತ್ತಿ ಶಾಖೆ ವ್ಯಾಪ್ತಿಯ ಪುಲಿಯೇರಿ ಇಂಜಿಲಗೆರೆ, ಗುಹ್ಯ ಗ್ರಾಮದ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ನಡೆಸಲಾಯಿತು.
ಈ ಸಂದರ್ಭ ಗುಂಪಿನಲ್ಲಿ ಇದ್ದ ಎರಡು ಕಾಡಾನೆಗಳು ಕಾರ್ಯಾಚರಣೆ ತಂಡದ ಮೇಲೆ ದಾಳಿ ನಡೆಸಲು ಮುಂದಾಗಿದ್ದು ಕೂದಲೆಳೆಯ ಅಂತರದಿAದ ಕಾರ್ಯಾಚರಣೆ ತಂಡದ ಸಿಬ್ಬಂದಿ ಪಾರಾಗಿದ್ದಾರೆ. ಮಂಗಳವಾರ ಬೆಳಗ್ಗಿನಿಂದಲೇ ಕಾರ್ಯಾಚರಣೆ ತಂಡವು ಕಾಫಿ ತೋಟದೊಳಗೆ ಕಾರ್ಯಾಚರಣೆ ನಡೆಸಿತು.
ಈ ಸಂದರ್ಭ ೫ ಮರಿಯಾನೆ ಸೇರಿದಂತೆ ೨೦ಕ್ಕೂ ಅಧಿಕ ಕಾಡಾನೆಗಳು ಕಾಫಿ ತೋಟದೊಳಗೆ ಕಂಡುಬAದವು ಎಂದು ಕಾರ್ಯಾಚರಣೆ ತಂಡದ ಸಿಬ್ಬಂದಿ ಮಾಹಿತಿ ನೀಡಿದರು. ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಿರುಬನಾಥನ್ ಹಾಗೂ ವಲಯ ಅರಣ್ಯ ಅಧಿಕಾರಿ ಶಿವರಾಂ ನೇತೃತ್ವದಲ್ಲಿ ಉಪವಲಯ ಅರಣ್ಯ ಅಧಿಕಾರಿ ಮನೋಜ್ ತಂಡ ಕಾರ್ಯಾಚರಣೆ ನಡೆಸಿತು. ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಮತ್ತು ಆರ್. ಆರ್. ಟಿ ಆನೆ ಕಾರ್ಯಪಡೆ ತಂಡದ ಸಿಬ್ಬಂದಿ ಪಾಲ್ಗೊಂಡಿದ್ದರು.