ಸಿದ್ದಾಪುರ, ಆ. ೪: ಹದೆಗೆಟ್ಟಿರುವ ಹಾಗೂ ಹೊಂಡಗಳಿAದ ಕೂಡಿದ ರಸ್ತೆಯನ್ನು ದುರಸ್ತಿ ಪಡಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ರಸ್ತೆಯಲ್ಲಿರುವ ಗುಂಡಿಗಳಿಗೆ ಕಾಫಿ, ಅಡಿಕೆ ಬಾಳೆ ಗಿಡಗಳನ್ನು ನೆಟ್ಟು ಪ್ರತಿಭಟಿಸಿದ ಘಟನೆ ಸಮೀಪದ ಗುಹ್ಯ ಗ್ರಾಮದಲ್ಲಿ ನಡೆದಿದೆ.
ಸಿದ್ದಾಪುರದ ಪಟ್ಟಣದಿಂದ ಗುಹ್ಯ, ಪಳ್ಳಕೆರೆ ಹಚ್ಚಿನಾಡು ಸಂಪರ್ಕ ರಸ್ತೆಯು ತೀವ್ರವಾಗಿ ಹದಗೆಟ್ಟಿದೆ. ಅಲ್ಲದೆ ಹೊಂಡ ಗುಂಡಿಗಳಿAದ ಕೂಡಿದೆ. ಆದರೆ ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಈವರೆಗೂ ಸ್ಪಂದಿಸದೆ ನಿರ್ಲಕ್ಷ ವಹಿಸಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿ ಗ್ರಾಮಸ್ಥರು ರಸ್ತೆಯಲ್ಲಿರುವ ಗುಂಡಿಗಳಿಗೆ ಕಾಫಿ ,ಅಡಿಕೆ, ಬಾಳೆ ಗಿಡಗಳನ್ನು ನೆಟ್ಟು ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಗ್ರಾಮಸ್ಥರು ಮಾತನಾಡಿ ಈ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿವೆ. ವಾಹನ ಸಂಚರಿಸಲು ಹಾಗೂ ಸಾರ್ವಜನಿಕರು ನಡೆದಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೆ ಸಂಬAಧಪಟ್ಟ ಇಲಾಖೆಯವರು ಹದಗೆಟ್ಟ ರಸ್ತೆಯನ್ನು ದುರಸ್ತಿಪಡಿಸಿ ಸಮಸ್ಯೆಗೆ ಸ್ಪಂದಿಸಬೇಕೆAದು ಗ್ರಾಮಸ್ಥರು ಒತ್ತಾಯಿಸಿದರು.