ಮಡಿಕೇರಿ, ಆ. ೪: ಅಕ್ಕಪಡೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಕುಟ್ಟ ವ್ಯಾಪ್ತಿಯ ಚೂರಿಕಾಡು ಸರಕಾರಿ ಶಾಲೆಗೆ ಭೇಟಿ ನೀಡಿ, ಅಲ್ಲಿ ನೆರೆದಿದ್ದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ, ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮ, ಸೈಬರ್ ಕ್ರೈಂ, ಅತಿಯಾದ ಮೊಬೈಲ್ ಬಳಕೆಯ ದುಷ್ಪರಿಣಾಮ, ಕಡ್ಡಾಯ ಶಿಕ್ಷಣ ಮತ್ತು ಶಿಕ್ಷಣದ ಮಹತ್ವ, ಬೇಟಿ ಬಚಾವೋ ಬೇಟಿ ಪಡಾವೋ, ಏಕ ಪೋಷಕ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರಕುವ ಆರ್ಥಿಕ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಿ ಸಹಾಯವಾಣಿ ಸಂಖ್ಯೆಗಳಾದ ೧೧೨, ೧೦೯೮, ೧೮೧, ೧೯೩೦ ಗಳನ್ನು ತುರ್ತು ಸಂದರ್ಭದಲ್ಲಿ ಬಳಸಿಕೊಳ್ಳುವಂತೆ ಅರಿವು ಮೂಡಿಸಲಾಯಿತು.