ಚೆಯ್ಯಂಡಾಣೆ, ಆ. ೪: ನಾಪೋಕ್ಲು ಹೋಬಳಿಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಮವಾರ ಸುರಿದ ಭಾರೀ ಗಾಳಿ ಮಳೆಗೆ ಹೊದವಾಡ ಗ್ರಾಮದ ನಿವಾಸಿ ಜಯಂತಿ ಎಂಬವರ ವಾಸದ ಮನೆಯ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಲ್ಲದೆ ಮನೆಯ ಒಂದು ಭಾಗ ಕುಸಿದು ನಷ್ಟ ಸಂಭವಿಸಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.