ಮಡಿಕೇರಿ, ಆ. ೫: ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಗೌಡ ಜನಾಂಗದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಸೆ. ೧೫ ರೊಳಗೆ ಅರ್ಜಿಯನ್ನು ಸಲ್ಲಿಸುವಂತೆ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಮನವಿ ಮಾಡಿದ್ದಾರೆ.

೧೦ನೇ ತರಗತಿ ಕನ್ನಡ ಮಾಧ್ಯಮದಲ್ಲಿ ಶೇ. ೮೫ ಮೇಲ್ಪಟ್ಟು ಮತ್ತು ಆಂಗ್ಲ ಮಾಧ್ಯಮದಲ್ಲಿ ಶೇ. ೯೦ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿ.ಯು.ಸಿಯಲ್ಲಿ ಗ್ರಾಮೀಣ ವಿಭಾಗದಲ್ಲಿ ಶೇ. ೯೦ ಮೇಲ್ಪಟ್ಟು ಮತ್ತು ನಗರ ವಿಭಾಗದಲ್ಲಿ ಶೇ. ೯೫ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ಸಿ.ಇ.ಟಿಯಲ್ಲಿ ೧೦೦೦ ರ‍್ಯಾಂಕ್ ಒಳಗೆ ಮತ್ತು ಎನ್.ಇ.ಇ.ಟಿಯಲ್ಲಿ ರಾಷ್ಟçಮಟ್ಟದಲ್ಲಿ ೫೦೦೦ ರ‍್ಯಾಂಕ್ ಒಳಗೆ ಪಡೆದುಕೊಂಡಿರುವ ಪ್ರತಿಭಾವಂತ ವಿದ್ಯಾರ್ಥಿಗಳು ‘ಪ್ರತಿಭಾ ಪುರಸ್ಕಾರ’ ಪಡೆಯಲು ಅರ್ಹರಾಗಿದ್ದಾರೆ. ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳು ದಿನಾಂಕ ೧೫.೦೯.೨೦೨೬ರ ಒಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ ಅರ್ಜಿಯನ್ನು ಸಂಘದ ಕಛೇರಿಗೆ ತಲುಪಿಸಬೇಕು.

ಸನ್ಮಾನ: ವೈದ್ಯಕೀಯ, ಇಂಜಿನಿಯರಿAಗ್, ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್ ಪಡೆದ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸರಕಾರದ ವತಿಯಿಂದ ಕೊಡಲ್ಪಡುವ ರಾಜ್ಯ, ರಾಷ್ಟç ಮತ್ತು ಅಂತರರಾಷ್ಟಿçÃಯ ಮಟ್ಟದಲ್ಲಿ ಪ್ರಶಸ್ತಿ ಪಡೆದು ಉತ್ತಮ ಪ್ರದರ್ಶನ ತೋರುತ್ತಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು. ಆಸಕ್ತರು ದಿನಾಂಕ ೧೫.೦೯.೨೦೨೬ರ ಒಳಗೆ ಸೂಕ್ತ ದಾಖಲೆ ಸಹಿತ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸಬೇಕೆಂದು ಅಂಬೆಕಲ್ ನವೀನ್ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗೆ ವಿದ್ಯಾಸಂಘದ ಕಾರ್ಯದರ್ಶಿ ಪೇರಿಯನ ಕೆ. ಉದಯಕುಮಾರ್ (೮೧೯೭೨೯೭೫೧೬) ಹಾಗೂ ವ್ಯವಸ್ಥಾಪಕ ಮತ್ತಾರಿ ರಮೇಶ್ (೯೪೮೦೭೭೫೭೭೨) ಅವರನ್ನು ಸಂಪರ್ಕಿಸಬಹುದಾಗಿದೆ.