ನಾಪೋಕ್ಲು, ಆ. ೫: ಇಲ್ಲಿಗೆ ಸಮೀಪದ ಮೂರ್ನಾಡು ಪಿಯು ಕಾಲೇಜಿನಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದಲ್ಲಿ, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಧಿಕೃತ ಪಟ್ಟಿಗಳನ್ನು ತೊಡಿಸಿ, ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಮುಲ್ಲೆರ ಕಾವೇರಪ್ಪ ಮತ್ತು ಸುನಿತಾ ಕಾವೇರಪ್ಪ ಅವರು ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಎಂಇಎಸ್ ಅಧ್ಯಕ್ಷ ಚಿನ್ನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಹರೀಶ್ ದೇವಯ್ಯ, ಖಜಾಂಚಿ ಜಯ ಮುತ್ತಪ್ಪ, ನಿರ್ದೇಶಕ ಸುಬ್ಬಯ್ಯ, ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘದ ಮುಖ್ಯ ಸಂಯೋಜಕಿ ಅನುರಾಧಾ, ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.