ಕುಶಾಲನಗರ, ಆ. ೫: ಕೊಡಗು ಜಿಲ್ಲೆಯಲ್ಲಿ ಬರ ಮತ್ತು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಆಗಮಿಸಿದ ಸಚಿವ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಕಾಂಗ್ರೆಸ್ ಪಕ್ಷ ಹಾಗೂ ಜಿಲ್ಲಾಡಳಿತದ ವತಿಯಿಂದ ಗಡಿ ಭಾಗದಲ್ಲಿ ಆತ್ಮೀಯವಾಗಿ ಸ್ವಾಗತ ಕೋರಲಾಯಿತು.

ಕ್ಷೇತ್ರ ಶಾಸಕ ಮಂತರ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪ್ರಮುಖರಾದ ಕೆ. ಪಿ. ಚಂದ್ರಕಲಾ, ಮಂಜುನಾಥ್ ಗುಂಡೂರಾವ್, ಪುಷ್ಪಲತಾ, ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಸೋಮಶೇಖರ್, ಜಿಲ್ಲಾ ಪಂಚಾಯಿತಿ ಸಿಇಒ ಆನಂದ ಪ್ರಕಾಶ್ ಮೀನಾ, ಅರಣ್ಯ ಇಲಾಖೆ ಮಡಿಕೇರಿ ವಿಭಾಗದ ಅಭಿಷೇಕ್, ತಾಲೂಕು ತಹಶೀಲ್ದಾರ್ ಕೃಷ್ಣಮೂರ್ತಿ, ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಟಿ. ಎಸ್. ಗಿರೀಶ್ ಮತ್ತಿತರ ಅಧಿಕಾರಿಗಳು, ಪ್ರಮುಖರು ಗಡಿಭಾಗದಲ್ಲಿ ಬರಮಾಡಿಕೊಂಡರು. ೪ಐದನೇ ಪುಟಕ್ಕೆ

೪ಐದನೇ ಪುಟಕ್ಕೆ

ಗಡಿಭಾಗದಲ್ಲಿ ಕಾವೇರಿ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಚಿವರು ಪೂಜೆ ಸಲ್ಲಿಸಿದರು.

ಇದೇ ಸಂದರ್ಭ ಗಡಿಭಾಗದ ಕಾವೇರಿಯ ಪುರಾತನ ಸೇತುವೆ ಮೇಲೆ ನಿರ್ಮಾಣವಾದ ಕಾವೇರಿ ರೋಟರಿ ಉದ್ಯಾನವನವನ್ನು ವೀಕ್ಷಿಸಿದ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.