ಮಡಿಕೇರಿ, ಆ. ೬: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ೨೦೨೬-೨೭ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ನೀಡಲಾಗುವ ದೂರ ಶಿಕ್ಷಣ ಮಾದರಿಯ ಉಚಿತ ಪದವಿ/ ಸ್ನಾತ್ತಕೋತ್ತರ ಪದವಿ ಕೋರ್ಸುಗಳಿಗೆ ಆನ್‌ಲೈನ್‌ನ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು hಣಣಠಿs://miಟಿoಡಿiಣಥಿ.ಞsouಠಿoಡಿಣಚಿಟ.ಛಿom ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ತಾ. ೧೦ ಕೊನೆಯ ದಿನವಾಗಿದೆ. ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಭ್ಯರ್ಥಿಯು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು (ಮುಸ್ಲಿಂ, ಜೈನ್ ಬೌದ್ದ, ಸಿಖ್ ಮತ್ತು ಪಾರ್ಸಿ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಒಟ್ಟು ಆದಾಯ ರೂ. ೮ ಲಕ್ಷ ಮೀರಬಾರದು. ಅಭ್ಯರ್ಥಿಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಿಯಮಗಳ ಅನುಸಾರ ಕನಿಷ್ಟ ಶೈಕ್ಷಣಿಕ ಅರ್ಹತೆ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸರ್ಕಾರಿ ನೌಕರರಾಗಿರಬಾರದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹಿಂದಿನ ಸಾಲಿನಲ್ಲಿ ಈ ಯೋಜನೆ ಅಡಿಯಲ್ಲಿ ಪ್ರವೇಶಾತಿಯನ್ನು ಪಡೆದಿರಬಾರದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಯಾವುದೇ ಕೋರ್ಸಿನಲ್ಲಿ ಪ್ರಸ್ತುತ ಪ್ರವೇಶಾತಿಯನ್ನು ಪಡೆದಿರಬಾರದು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೫೫೨೮/ ೨೨೦೨೧೪ ಹಾಗೂ ಅಲ್ಪಸಂಖ್ಯಾತರ ಸಹಾಯಕವಾಣಿ ಸಂಖ್ಯೆ: ೮೨೭೭೭೯೯೯೯೦, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಾಯವಾಣಿ ಸಂಖ್ಯೆ ೮೬೯೦೫೪೪೫೨೨, ೯೪೪೮೬೬೮೮೦, ೯೯೪೫೩೬೬೦೬೨, ೯೧೧೩೫೧೨೫೬೫, ೯೬೧೧೪೧೮೭೨೬, ೯೬೮೬೫೭೬೩೯೯, ೯೦೩೫೩೯೫೧೩೭, ೮೧೨೩೪೬೯೦೧೭, ೯೮೪೪೦೧೦೪೦೭ ನ್ನು ಹಾಗೂ ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂ.ಸಂ. ೮೫೪೮೦೬೮೫೧೯, ತಾಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂರವಾಣಿ ಸಂಖ್ಯೆ ೯೯೦೦೭೩೧೦೩೭ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ ೯೯೭೨೭೯೯೦೯೧ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ.ಎಸ್. ಸಚಿನ್ ತಿಳಿಸಿದ್ದಾರೆ.