ಮಡಿಕೇರಿ, ಜು. ೬: ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊAಡಿದ್ದು, ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪಕ್ಷದ ಜಿಲ್ಲಾ ಉಸ್ತುವಾರಿ ಹಾಗೂ ಕೇರಳದ ಶಾಸಕ ಕೆ.ಎಂ. ಅಭಿಜಿತ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ದೇಶವ್ಯಾಪಿ ಬಲಪಡಿಸುವ ನಿಟ್ಟಿನಲ್ಲಿ ಸಂಘಟನಾ ಸೃಜನಾ ಅಭಿಯಾನವನ್ನು ಎಐಸಿಸಿ ಕೈಗೊಂಡಿದೆ. ಇದರ ಭಾಗವಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಅರ್ಜಿ ಸಲ್ಲಿಸುವ ಅವಕಾಶವನ್ನು ನೀಡಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದ ನಂತರ ಶಾಸಕರು, ಜಿಲ್ಲಾ ಕಾಂಗ್ರೆಸ್ ಸದಸ್ಯರು, ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಹಿರಿಯ ನಾಯಕರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗುವುದು. ಹಾಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಅರ್ಜಿ ನಮೂನೆ ನೀಡಲಾಗಿದ್ದು, ಉಚಿತವಾಗಿ ಇದನ್ನು ಪಡೆದುಕೊಂಡು ಜಿಲ್ಲಾ ಕಾಂಗ್ರೆಸ್‌ಗೆ ಸಲ್ಲಿಸಬೇಕಾಗಿದೆ. ೧೫ ದಿನದೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಪಕ್ಷದ ಸಂಘಟನೆಗೆ ಸಹಕಾರ ನೀಡುತ್ತಿರುವುದು, ಪಕ್ಷನಿಷ್ಠೆ, ಬದ್ಧತೆಯನ್ನು ಪರಿಗಣಿಸಲಾಗುವುದು ಎಂದು ಮಾಹಿತಿ ನೀಡಿದರು.

ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಎಂಎಲ್‌ಸಿ ಆರ್.ವಿ. ವೆಂಕಟೇಶ್ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಪ್ರಕ್ರಿಯೆ ಆರಂಭಗೊAಡಿದ್ದು, ಜಿಲ್ಲಾ ಅಧ್ಯಕ್ಷ ಸ್ಥಾನ ನೇಮಕ ಸಂಬAಧ ಸಮಿತಿಯು ಕಾರ್ಯೋನ್ಮುಖಗೊಂಡಿದೆ ಎಂದರು.

ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಡಿ.ಕೆ. ಬ್ರಿಜೇಷ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಮತಾ ಗಟ್ಟಿ, ಪದ್ಮನಾಭ ಹಾಜರಿದ್ದರು.