ಮಡಿಕೇರಿ ಆ. ೭: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ (ಸಿಡಾಕ್) ಜಿಲ್ಲಾ ಕೈಗಾರಿಕಾ ಕೇಂದ್ರ ಕೊಡಗು, ಇವರ ಸಂಯುಕ್ತ ಆಶ್ರಯದಲ್ಲಿ, ಮೈಸೂರು ಜಿಲ್ಲೆಯಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕ ಶಿಬಿರವು ತಾ.೧೧ ರಂದು ಗೋಣಿಕೊಪ್ಪದ ಸರ್ಕಾರಿ ಆಸ್ಪತ್ರೆ ಹಿಂಭಾಗದ ೨ನೇ ಬ್ಲಾಕ್ ಕಿತ್ತೂರು ಕೆಆರ್‌ಪಿ ರಸ್ತೆ, ತಾಲೂಕು ಕಾವೇರಿ ಮಹಿಳಾ ಸಮಾಜದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿAದ ದೊರೆಯುವ ನೆರವು/ ಪ್ರೋತ್ಸಾಹ, ಯೋಜನೆಗಳ ಆಯ್ಕೆ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ದಿ ತರಬೇತಿ ಬಗ್ಗೆ ಮಾಹಿತಿ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು. ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದೆ. ಭಾಗವಹಿಸುವವರು ಕನಿಷ್ಟ ೧೮ ವರ್ಷ ವಯಸ್ಸಿನವರಾಗಿರಬೇಕು ಹಾಗೂ ಕನಿಷ್ಟ ಹತ್ತನೇ ತರಗತಿ ವ್ಯಾಸಂಗ ಮಾಡಿರಬೇಕು. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ದೂ.ಸಂ. ೭೭೬೦೧೪೫೭೮೪/ ೮೩೧೦೭೩೮೮೧೯ ಅನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಜಿಲ್ಲಾ ಕೈಗಾರಿಕಾ ಕೇಂದ್ರದ ಸಲಹೆಗಾರರು ತಿಳಿಸಿದ್ದಾರೆ.