ಕುಶಾಲನಗರ, ಆ. ೭: ಕುಶಾಲನಗರ ಕೊಡವ ಸಮಾಜದಲ್ಲಿ ಕಕ್ಕಡ ೧೮ ರ ಆಚರಣೆ ನಡೆಯಿತು. ಸಮಾಜದ ಅಧ್ಯಕ್ಷ ವಾಂಚೀರ ಮನು ನಂಜುAಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಮಾಜದ ಹಿರಿಯರಾದ ಪೇರಿಯಂಡ ರೀಟಾ ಉದ್ಘಾಟಿಸಿದರು.
ಆಟಿ ಸೊಪ್ಪು ಬಳಸಿ ತಯಾರಿಸಿದ ವಿವಿಧ ಬಗೆಯ ಖಾದ್ಯಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜದ ಕಾರ್ಯದರ್ಶಿ ಅಯಿಲಪಂಡ ಸಂಜು ಬೆಳ್ಳಿಯಪ್ಪ, ಪೊಮ್ಮಕ್ಕಡ ಕೂಟದ ನಿರ್ದೇಶಕರು ಇದ್ದರು.