ವೀರಾಜಪೇಟೆ, ಆ. ೭: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮ ತಾ. ೮ ರಂದು ಮಧ್ಯಾಹ್ನ ೨ ಗಂಟೆಗೆ ವೀರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ನೆರವೇರಲಿದೆ.

ಮಡಿಕೇರಿ ಜಿಲ್ಲಾ ಖಜಾನೆ ಉಪ ನಿರ್ದೇಶಕ ಡಾ. ರಘುನಾಥ ಬಿ.ಎನ್. ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು ಪ್ರಾಸ್ತಾವಿಕ ನುಡಿಯನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಘಟಕದ ಮಹಾ ಪೋಷಕರಾದ ಮಲ್ಲಿಕಾರ್ಜುನ ತೊದಲಬಾಗಿ, ಗೌರವಾಧ್ಯಕ್ಷ ಎಲ್.ಐ. ಲಕ್ಕಮ್ಮನವರ್, ರಾಜ್ಯಾಧ್ಯಕ್ಷರಾದ ರಮಾ ಆರ್., ಪ್ರಧಾನ ಕಾರ್ಯದರ್ಶಿ ಪರ್ವೀನ್ ಬಾನು, ಪ್ರೊ. ಬಸವರಾಜು ಕೆ. ಹಿರಿಯ ಉಪಾಧ್ಯಕ್ಷರಾದ ಶಾಮಸುಂದರ್, ರಾಜ್ಯ ಹಾಗೂ ವಿವಿಧ ಜಿಲ್ಲೆಗಳ ಜಿಲ್ಲಾ ಪದಾಧಿಕಾರಿಗಳು ಪಾಲ್ಗೊಳ್ಳುವರು. ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷೆ ಕಮಲಮ್ಮ ವಹಿಸುವರು. ಸಾಹಿತ್ಯ, ಕಲೆ, ಶಿಕ್ಷಣ, ಕ್ರೀಡೆ, ಮಾದ್ಯಮ, ಸಮಾಜ ಸೇವೆ ಹಾಗೂ ಇತರೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ ಸಾಧಕರಿಗೆ ಆದರ್ಶ ಸೇವಾ ರತ್ನ ಜಿಲ್ಲಾ ಮಟ್ಟದ ಪ್ರಶಸ್ತಿಯೊಂದಿಗೆ ಗೌರವ ಸನ್ಮಾನವನ್ನು ಹಮ್ಮಿಕೊಂಡಿದ್ದು ಜೊತೆಗೆ ಸಾಂಸ್ಕೃತಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಸಂಗೀತ, ನೃತ್ಯ, ಗೀತ ಗಾಯನ, ಕವಿಗೋಷ್ಠಿ ಹಾಗೂ ಇತರೆ ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಾಗುತ್ತಿದೆ ಎಂದು ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು ಮಾಹಿತಿ ನೀಡಿದರು.