ಮಡಿಕೇರಿ, ಆ. ೭: ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು.
ಯುವ ನಿಧಿ ಯೋಜನೆ ಕುರಿತು ಹೆಚ್ಚಿನ ಪ್ರಚಾರವಾಗಬೇಕು. ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಯೋಜನೆಯ ಉಪಯೋಗವನ್ನು ಮಾಡಿಕೊಳ್ಳಲು ತಿಳಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಯುವ ನಿಧಿ ಯೋಜನೆಯಡಿ ಅರ್ಹರಾಗಿರುವವರ ವಿವರವನ್ನು ಸಭೆಯಲ್ಲಿ ಉದ್ಯೋಗ ವಿನಿಮಯಾಧಿಕಾರಿಗಳು ಮಾಹಿತಿ ನೀಡಿ ಮಾತನಾಡಿ, ಯುವನಿಧಿಯ ಫಲಾನುಭವಿಗಳಾಗಲು ೨೦೨೪-೨೫ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿರಬೇಕು. ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರೂ.೩ ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದರು.
ಎಲ್ಲಾ ಕಾಲೇಜುಗಳಿಗೆ ನಿರಂತರವಾಗಿ ಭೇಟಿ ನೀಡಿ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿ, ಇದರಿಂದ ಯೋಜನೆಯ ಸದುಪಯೋಗವಾಗುತ್ತದೆ. ರೇಡಿಯೋ ಪತ್ರಿಕೆ ಹಾಗೂ ದೃಶ್ಯಮಾಧ್ಯಮಗಳಲ್ಲಿ ಯೋಜನೆಯ ಕುರಿತು ಜಾಹೀರಾತು ನೀಡಲು ಪೊನ್ನಂಪೇಟೆ ತಾ.ಪಂ.ಗ್ಯಾರAಟಿ ಅಧ್ಯಕ್ಷರಾದ ಪ್ರಶಾಂತ್ ಅವರು ತಿಳಿಸಿದರು.
ಪೊನ್ನಂಪೇಟೆ ತಾಲೂಕಿನಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಎಸ್.ಸಿ/ ಎಸ್.ಟಿಗಳ ಜಾತಿ ಪ್ರಮಾಣ ಪತ್ರವನ್ನು ರೇಷನ್ ಕಾರ್ಡ್ಗೆ ಲಿಂಕ್ ಮಾಡುವ ಕಾರ್ಯ ನಡೆಯುತ್ತಿದ್ದು, ರೇಷನ್ ಕಾರ್ಡ್ ಹೊಂದಿರುವವರು ಎಲ್ಲರೂ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುವುದು ಕಂಡುಬAದಲ್ಲಿ ಅಂತವರ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ಸಂಬAಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.
ಶಾಲಾ ಮಕ್ಕಳಿಗೆ ಪ್ರತಿ ಶನಿವಾರ ಅರ್ಧ ದಿನವಾಗಿದ್ದು, ಅಂತಹ ಸಮಯದಲ್ಲಿ ಮಕ್ಕಳಿಗೆ ಬಸ್À ಸಮಸ್ಯೆಯಾಗುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಗೋಣಿಕೊಪ್ಪಲು ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ಗಳನ್ನು ನಿಲ್ಲಿಸಲು ಅವಕಾಶ ಕಲ್ಪಿಸಿಕೊಡಲು ಸಭೆಯಲ್ಲಿ ಕೋರಲಾಯಿತು.
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ವೀರಾಜಪೇಟೆ ತಾ.ಪಂ.ಇಒ ರಾಜೇಶ್, ಗ್ಯಾರಂಟಿ ಯೋಜನೆಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.