ನಾಪೋಕ್ಲು, ಆ.೫: ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಸಭಾಂಗಣದಲ್ಲಿ ನಡೆದ ಕಕ್ಕಡ ತೀನಿ ನಮ್ಮೆ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಶಾ ಮೇದಪ್ಪ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟçಪ್ರಶಸ್ತಿ ವಿಜೇತ ಮುಕ್ಕಾಟಿರ ಸೌಮ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು .

ಈ ಸಂದರ್ಭ ಲೇಖಕಿ ಅಖಿಲ ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಐಚಂಡ ರಶ್ಮಿ ಪೂವಮ್ಮ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಅಲ್ಲಾರಂಡ ಬೀನಾ ಬೊಳ್ಳಮ್ಮ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ, ಕೊಡವ ಸಮಾಜ ಹಾಗೂ ಪೊಮ್ಮಕ್ಕಡ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.