ವೀರಾಜಪೇಟೆ, ಆ. ೭: ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶಿಕ್ಷಕಿಯರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವೀರಾಜಪೇಟೆ ತಾಲೂಕು ಘಟಕದ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.
ಕಂಡAಗಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪವೀನಾ ಹಾಗೂ ಹೆಗ್ಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹೇಮಲತಾ ಅವರನ್ನು ಸಂಘದ ಪದಾಧಿಕಾರಿಗಳು ಶಾಲಾ ಆವರಣದಲ್ಲಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.