ಪೊನ್ನಂಪೇಟೆ, ಆ. ೫: ಕೃತಕ ಬುದ್ಧಿಮತ್ತೆ (ಎಐ) ಸಾಧನಗಳು ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಾನಸಿಕ ಆರೋಗ್ಯ, ಏಕಾಗ್ರತೆ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಹಾಗೂ ವೈಯಕ್ತಿಕ ಗೌಪ್ಯತೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಬಿಟ್ಟಂಗಾಲದ ಕ್ರೇಡೋ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಫಿಜಿಶಿಯನ್ ಡಾ. ಅಪೂರ್ವ ಪ್ರಸನ್ನ ಎಂ ಹೇಳಿದರು.
ಗೋಣಿಕೊಪ್ಪಲಿನ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ತಂತ್ರಜ್ಞಾನವನ್ನು ಅಗತ್ಯವಿರುವ ಮಟ್ಟಿಗೆ ಮಾತ್ರ ಬಳಸಬೇಕು. ಯಾವುದೇ ಎಐ ಸಾಧನವನ್ನು ಸಂಪೂರ್ಣವಾಗಿ ಅವಲಂಬಿಸದೆ ಸ್ವತಂತ್ರ ಚಿಂತನೆ ಹಾಗೂ ಸಮಸ್ಯೆ ಪರಿಹರಿಸುವ ಕೌಶಲ್ಯವನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು. ಸಾಮಾಜಿಕ ಜಾಲತಾಣಗಳು ಹಾಗೂ ಎಐ ಆಧಾರಿತ ಸೇವೆಗಳನ್ನು ಬಳಸುವಾಗ ವೈಯಕ್ತಿಕ ಮತ್ತು ಸೂಕ್ಷö್ಮ ಮಾಹಿತಿಯನ್ನು ಹಂಚಿಕೊಳ್ಳಬಾರದು. ಮಾನಸಿಕ ಒತ್ತಡ ಅಥವಾ ವೈಯಕ್ತಿಕ ಸಮಸ್ಯೆಗಳಿದ್ದರೆ ಯಂತ್ರಗಳಿಗಿAತ ಕುಟುಂಬದವರು, ಶಿಕ್ಷಕರು, ಸ್ನೇಹಿತರು ಅಥವಾ ವೈದ್ಯರೊಂದಿಗೆ ಚರ್ಚಿಸುವುದು ಉತ್ತಮ ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ದಿನನಿತ್ಯ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಕ್ರೀಡೆ ಹಾಗೂ ದೈಹಿಕ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು, ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮಂಡೆಪAಡ ಸುಗುಣ ಮುತ್ತಣ್ಣ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿದ್ದರೂ ಕಾವೇರಿ ಕಾಲೇಜು ಗುಣಮಟ್ಟದ ಶಿಕ್ಷಣ, ಶಿಸ್ತು ಮತ್ತು ಉತ್ತಮ ಶೈಕ್ಷಣಿಕ ವಾತಾವರಣದ ಮೂಲಕ ಹೆಸರುವಾಸಿಯಾಗಿದೆ. ಇಲ್ಲಿ ವ್ಯಾಸಂಗ ಮಾಡಿದ ಅನೇಕ ವಿದ್ಯಾರ್ಥಿಗಳು ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಶೇ.೧೦೦ ಅಂಕ ಪಡೆದ ಫರ್ಹಾನ, ಬಿಸಿನೆಸ್ ಸ್ಟಡೀಸ್ನಲ್ಲಿ ಶೇ.೧೦೦ ಅಂಕ ಗಳಿಸಿದ ಗಾನವಿ, ಕನ್ನಡ ಮಾಧ್ಯಮದ ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಪೂಜಾ ಹಾಗೂ ವೈದ್ಯಕೀಯ ಸೇವೆಗಾಗಿ ಡಾ. ಅಪೂರ್ವ ಪ್ರಸನ್ನ ಎಂ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ವಿಪ್ರ ನೀಲಮ್ಮ, ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ, ಉಪನ್ಯಾಸಕರು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.