ಮಡಿಕೇರಿ, ಆ.೫: ೨೦೨೬ನೇ ಏಪ್ರಿಲ್-ಜೂನ್ ಅವಧಿಯಲ್ಲಿ ೩೪ ಕಡೆಗಳಲ್ಲಿ ದಾಳಿ ನಡೆಸಿ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದ ಸಂಬAಧ ೩೬೦ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಿ ಅರಿವು ಮೂಡಿಸಲಾಗಿದೆ. ೨,೫೧೯ ಜನರಿಗೆ ಸ್ಕಿçÃನಿಂಗ್, ೧,೮೮೫ ರೋಗಿಗಳಿಗೆ ಆಪ್ತ ಸಮಾಲೋಚನೆ ನಡೆಸಿ ೨,೧೭೦ ನಿಕೋಟಿನ್ ಗಮ್ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ-ಮಡಿಕೇರಿ ವತಿಯಿಂದ ಪ್ರತೀ ವರ್ಷವು ವಿದ್ಯಾರ್ಥಿಗಳಲ್ಲಿ ತಂಬಾಕಿನ ಉತ್ಪನ್ನಗಳ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯಿದೆಯ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ಅರಿವು ಕಾರ್ಯಕ್ರಮಗಳು, ಕೋಟ್ಪಾ ತನಿಖಾ ದಾಳಿಗಳು, ಬೀದಿನಾಟಕ, ವಿಶ್ವ ತಂಬಾಕು ರಹಿತ ದಿನಾಚರಣೆ, ತಂಬಾಕು ಮುಕ್ತ ಯುವ ಅಭಿಯಾನ, ಗುಂಪು ಚರ್ಚೆ, ಆಪ್ತ ಸಮಾಲೋಚನೆ, ಇನ್ನಿತರ ಐಇಸಿ ಚಟುವಟಿಕೆಗಳು ಮತ್ತು ತರಬೇತಿ ಕಾರ್ಯಾಗಾರವು ಜಿಲ್ಲೆಯಾದ್ಯಾಂತ ನಡೆಯುತ್ತಿವೆ ಎಂದು ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ.

೨೦೨೬-೨೭ನೇ ಸಾಲಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಕೋಟ್ಪಾ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೋಟ್ಪಾ ತನಿಖಾ ದಾಳಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದುವ ಯಾವುದೇ ವ್ಯಕ್ತಿಗೆ ಪ್ರತಿ ಉಲ್ಲಂಘನೆಗೆ ರೂ ೧೦೦೦ ವರೆಗೆ ಸೆಕ್ಷನ್ ೨೧ ರ ಪ್ರಕಾರ ಅಧಿಕಾರಿಗಳು ಸ್ಥಳದಲ್ಲೇ ದಂಡವನ್ನು ವಿಧಿಸಬಹುದು ಅಥವಾ ದಂಡ ಕಟ್ಟಲು ನಿರಾಕರಿಸಿದಲ್ಲಿ ಕೋರ್ಟ್ ಮುಂದೆ ಹಾಜರಾಗುವಂತೆ ಚಲನ್ ನೀಡಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು, ಉತ್ತೇಜನ, ಪ್ರಾಯೋಜಕತೆಯ ಮೇಲೆ ನಿಷೇಧ ಉಲ್ಲಂಘನೆಯಾದಲ್ಲಿ ದಂಡ ಮತ್ತು ಜೈಲು ಶಿಕ್ಷೆಯ ಕುರಿತು ಅರಿವು ಮೂಡಿಸಲಾಗಿದೆ.

ತಂಬಾಕು ಉತ್ಪನ್ನಗಳನ್ನು ಅಪ್ರಾಪ್ತ ವಯಸ್ಕರಿಗೆ (೨೧ ವರ್ಷ ದೊಳಗಿನ ಮಕ್ಕಳು) ಮಾರಾಟ ಮಾಡಿಸುವುದರ ಮೇಲಿನ ನಿಷೇಧದ ಕುರಿತು ಅರಿವು ಮೂಡಿಸಲಾಗಿದೆ, ಶಿಕ್ಷಣ ಸಂಸ್ಥೆಗಳ ೧೦೦ ಗಜ/ ಯಾರ್ಡ್ ಅಂತರದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ತಮ್ಮ ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣವಾಗಿ ತಂಬಾಕು ಮುಕ್ತವನ್ನಾಗಿಸುವ ಜವಾಬ್ದಾರಿ ಹೊಂದಿರುತ್ತಾರೆ. ಈ ಕಾಯಿದೆ ಅಡಿಯಲ್ಲಿ ಈ ನಿಯಮವನ್ನು ಉಲ್ಲಂಘಿಸಿದ ವ್ಯಕ್ತಿಗೆ ರೂ ೧ ಸಾವಿರ ವರೆಗೆ ದಂಡವನ್ನು ಶಾಲಾ ಮುಖ್ಯೋಪಾಧ್ಯಾಯರು ಅಥವಾ ಸಂಬAಧಪಟ್ಟ ಹತ್ತಿರದ ಪೊಲೀಸ್ ಠಾಣೆಯವರು ವಿಧಿಸಬಹುದಾಗಿರುತ್ತದೆ. ಈ ಸಂಬAಧ ಏಪ್ರಿಲ್-ಜೂನ್ ವರೆಗೆ ೩೪ ದಾಳಿಗಳನ್ನು ನಡೆಸಿ ೭ ಪ್ರಕರಣಗಳನ್ನು ದಾಖಲಿಸಿ ಅರಿವು ಮೂಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಡಿ ಬಿಡಿಯಾಗಿ ಸಿಗರೇಟು ಮಾರಾಟ ಮಾಡುವಂತಿಲ್ಲ ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುವುದೆಂದು ಅರಿವು ಮೂಡಿಸಲಾಗಿದೆ., ಪ್ರತಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಪ್ಯಾಕುಗಳ ಮೇಲೆ ಶೇ.೮೫ ರಷ್ಟು ಆರೋಗ್ಯದ ಎಚ್ಚರಿಕೆ ಸಂದೇಶಗಳಿಲ್ಲದೆ ಮಾರಾಟ ಮಾಡುವುದರ ಮೇಲೆ ನಿಷೇಧ. ಉಲ್ಲಂಘನೆಯಾದಲ್ಲಿ ದಂಡ ಮತ್ತು ಜೈಲು ಶಿಕ್ಷೆಯ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಶಾಲಾ-ಕಾಲೇಜು ಅರಿವು ಕಾರ್ಯಕ್ರಮ

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ೪೮ ಶಾಲೆ ಹಾಗೂ ಕಾಲೇಜುಗಳಲ್ಲಿ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ,

ಶಾಲಾ/ ಕಾಲೇಜು ತಂಬಾಕು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿ ಪ್ರತಿ ೬ ತಿಂಗಳಿಗೊಮ್ಮೆ ಸಭೆ ಮಾಡಿ ತಂಬಾಕು ದುಷ್ಪರಿಣಾಮದ ಕುರಿತು ಅರಿವು ಮೂಡಿಸುವಂತೆ ತಿಳಿಸಲಾಗಿದೆ.

ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ ಮಾರ್ಗಸೂಚಿಯ ಬಗ್ಗೆ ಮಾಹಿತಿ ನೀಡಿ ಶೇ.೯೦ ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಲ್ಲಿ ಈ ತಂತ್ರಾAಶದಲ್ಲಿ ನಮೂದಿಸಿ, ತಮ್ಮ ಸಂಸ್ಥೆಯನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಯೆAದು ಘೋಷಣೆ ಮಾಡುವಂತೆ ತಿಳಿಸಲಾಗಿದೆ.

ವಿದ್ಯಾರ್ಥಿಗಳಿಗೆ ಚಿತ್ರಕಲಾ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಹಮ್ಮಿಕೊಂಡು ಪ್ರಶಸ್ತಿ ವಿತರಿಸಲಾಗುವುದು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರತಿ ೩ ತಿಂಗಳಿಗೊಮ್ಮೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಮಾಹಿತಿ ಇತ್ತಿದ್ದಾರೆ.