ಮಡಿಕೇರಿ, ಆ. ೭: ಜಿಲ್ಲೆಯಲ್ಲಿ ತಾ.೧೦ ರಂದು ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮ (ಎನ್‌ಡಿಡಿ) ಹಾಗೂ ಆಗಸ್ಟ್ ೧೭ ರಂದು ಮಾಪ್ ಅಪ್ ದಿನವನ್ನು ಹಮ್ಮಿಕೊಳ್ಳಲಾಗಿದ್ದು,

ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ತಾ.೧೦ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.