ಮಡಿಕೇರಿ, ಆ. ೭: ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಕೊಡಗು ಜಿಲ್ಲೆಯಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವ ಹಾಗೂ ಉದ್ಯೋಗಾವಕಾಶವನ್ನು ಸೃಷ್ಟಿಸುವ ಸಲುವಾಗಿ ನೂತನವಾಗಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸುವ ಸಲುವಾಗಿ ನೈಜ ಕೈಗಾರಿಕಾ ಉದ್ದೇಶಕ್ಕಾಗಿ ಜಮೀನು ಬೇಡಿಕೆ (ಡಿಮಾಂಡ್ ಸರ್ವೆ) ಯನ್ನು ಅಂದಾಜು ಮಾಡಲು ಜಿಲ್ಲೆಯ ಆಸಕ್ತ ಉದ್ದಿಮೆದಾರರು/ ಹೂಡಿಕೆದಾರರು ಹಾಗೂ ನವೋದ್ದಿಮೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಚೇರಿ ಸಮಯದಲ್ಲಿ ಉಚಿತವಾಗಿ ಅರ್ಜಿ ಪಡೆದು, ಅರ್ಜಿಯನ್ನು ಭರ್ತಿ ಮಾಡಿ ದಾಖಲಾತಿಗಳೊಂದಿಗೆ ಕಚೇರಿಗೆ ಸೆಪ್ಟೆಂಬರ್ ೩೦ ರೊಳಗೆ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗೆ ೦೮೨೭೨-೨೨೮೭೪೬ ಈ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.