ಕುಶಾಲನಗರ, ಆ. ೭: ಶಾಲಾ ಕಾಂಪೌAಡ್ ನಿಂದ ಗೇಟ್ ಕಳಚಿ ಬಿದ್ದು ಪುಟ್ಟಬಾಲಕಿ ಸಾವನ್ನಪ್ಪಿದ ಘಟನೆ ಕುಶಾಲನಗರ ಸಮೀಪದ ಬಸವನಹಳ್ಳಿ ಹಾಡಿಯಲ್ಲಿ ಸಂಭವಿಸಿದೆ.
ಬಸವನಹಳ್ಳಿ ಹಾಡಿಯ ಸತೀಶ ಮತ್ತು ಪವಿತ್ರ ದಂಪತಿಯ ಪುತ್ರಿ ಅಪೂರ್ವ (೪) ಮೃತ ಬಾಲಕಿ. ಮನೆಯ ಸಮೀಪ ಇರುವ ಗಿರಿಜನ ಆಶ್ರಮ ಶಾಲೆಯಲ್ಲಿ ವ್ಯಾಸಂಗ ಮಾಡುವ ತನ್ನ ಸಹೋದರಿಯನ್ನು ಕರೆದೊಯ್ಯಲು ಬಾಲಕಿ ಪ್ರತಿ ದಿನ ಗೇಟ್ ಬಳಿ ಬರುವುದು, ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಆಟವಾಡುವುದು ವಾಡಿಕೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದೇ ರೀತಿ ಶುಕ್ರವಾರ ಸಂಜೆ ವೇಳೆ ಗೇಟ್ ಬಳಿ ಬಂದಾಗ ಶಿಥಿಲವಾಗಿದ್ದ ಕಾಂಪೌAಡ್ ನಿಂದ ಬೃಹತ್ ಕಬ್ಬಿಣದ ಗೇಟ್ ಗೋಡೆ ಸಹಿತ ಕಳಚಿ ಬಾಲಕಿ ತಲೆ ಮೇಲೆ ಬಿದ್ದಿದೆ ತೀವ್ರ ಗಾಯಗೊಂಡ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಸ್ಥಳಕ್ಕೆ ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಗಿರಿಜನ ಮುಖಂಡ ಆರ್.ಕೆ.ಚಂದ್ರ ಮತ್ತಿತರರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಕ್ಷೇತ್ರ ಶಾಸಕ ಡಾ ಮಂತರ್ ಗೌಡ ದೂರವಾಣಿ ಮೂಲಕ ಮೃತ ಬಾಲಕಿ ಪೋಷಕರನ್ನು ಸಂಪರ್ಕಿಸಿ ಸಾಂತ್ವನ ಹೇಳಿದರು.
ಈ ಸಂದರ್ಭ ಜಿಲ್ಲಾ ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿ ಭಾಗೀರಥಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ತಹಶೀಲ್ದಾರ್ ಕೃಷ್ಣಮೂರ್ತಿ ಸೇರಿದಂತೆ ಸ್ಥಳೀಯ ಮುಖಂಡರಾದ ಚಂದ್ರಶೇಖರ್, ನಂಗಾರು ಜಗ, ಮಹೇಶ್, ಗುಡ್ಡೆಹೊಸೂರು ಗ್ರಾಪಂ ಪಿಡಿಓ ಸುಮೇಶ್, ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿದರು.