ಮಡಿಕೇರಿ, ಆ. ೭: ಸೋಮವಾರಪೇಟೆ ತಾಲೂಕಿನ ಹೊಸಗುತ್ತಿ ಸರಕಾರಿ ಶಾಲೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಡಿ. ವನಜಾಕ್ಷಿ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು.
ಬಿ.ಡಿ. ವನಜಾಕ್ಷಿ ಅವರು ಸಕಲೇಶಪುರ ತಾಲೂಕಿನಲ್ಲಿ ಶಿಕ್ಷಕ ವೃತ್ತಿಯನ್ನು ಆರಂಭಿಸಿ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ, ಶನಿವಾರಸಂತೆಯಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಹೊಸಗುತ್ತಿ ಸರಕಾರಿ ಶಾಲೆಯಲ್ಲಿ ವಯೋನಿವೃತ್ತಿ ಹೊಂದಿ ತಮ್ಮ ೩೦ ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ಪ್ರಮುಖರು, ಶಿಕ್ಷಕರು ಹಾಗೂ ಗ್ರಾಮಸ್ಥರು ಬಿ.ಡಿ. ವನಜಾಕ್ಷಿ ಅವರ ಕರ್ತವ್ಯ ನಿಷ್ಠೆಯನ್ನು ಶ್ಲಾಘಿಸಿ ಸನ್ಮಾನಿಸಿದರು.