ಮಡಿಕೇರಿ, ಆ. ೮ : ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರವನ್ನು ವೀರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗಿ ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಗಿತ್ತು.

ಚೆನ್ನಯನಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಿವಪ್ಪ ಗೋಟ್ಯಲ್ ಮಾತನಾಡಿ ಶಾಲಾ ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ತಪಾಸಣಾ ಶಿಬಿರಗಳಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆAದು ಸಲಹೆ ನೀಡಿದರು.

ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಕೆ.ಕೆ. ಸುಷಾ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳಾದ ಸುಧಾ, ಅನಿತಾ, ಸಮುದಾಯ ಆರೋಗ್ಯ ಅಧಿಕಾರಿಗಳಾದ ವಿಕ್ರಂ, ಸಾಗರ್, ಆಶಾ ಕಾರ್ಯಕರ್ತೆ ಇಂದಿರಾ, ತೇಜಸ್ವಿನಿ ಸೇರಿದಂತೆ ಶಾಲಾ ಶಿಕ್ಷಕರುಗಳು ಪೋಷಕರು ಹಾಜರಿದ್ದರು.