*ಗೋಣಿಕೊಪ್ಪ, ಆ. ೮: ಗೋಣಿಕೊಪ್ಪ ಪಿ.ಸಿ. ಕ್ಲಬ್, ಗೋಣಿಕೊಪ್ಪ ರೋಟರಿ ಹಾಗೂ ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಹಯೋಗದಲ್ಲಿ ಆಗಸ್ಟ್ ೩೦ ರಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಗೋಣಿಕೊಪ್ಪ ಪಿ.ಸಿ. ಕ್ಲಬ್ ಅಧ್ಯಕ್ಷ ಪೊನ್ನಿಮಾಡ ಆರ್. ಪ್ರದೀಪ್ ತಿಳಿಸಿದ್ದಾರೆ.
ಗೋಣಿಕೊಪ್ಪ ಅನುದಾನಿತ ಪ್ರೌಢ ಶಾಲಾ ಸಭಾಂಗಣದಲ್ಲಿ ಬೆಳಿಗ್ಗೆ ೯ ಗಂಟೆಯಿAದ ಆರಂಭಗೊಳ್ಳಲಿದೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಪ್ರಾಥಮಿಕ ಬಾಲಕ, ಬಾಲಕಿ, ಪ್ರೌಢಶಾಲಾ ಬಾಲಕ, ಬಾಲಕಿ, ಮುಕ್ತ ವಿಭಾಗಗಳಲ್ಲಿ ಒಟ್ಟು ಐದು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಆಗಸ್ಟ್ ೨೫ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕಿದೆ. ಸ್ಪರ್ಧಿಗಳು ಚೆಸ್ ಬೋರ್ಡ್ ತರಬೇಕಿದೆ. ಮದ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ೧೨ ವರ್ಷಗಳಿಂದ ನಿರಂತರವಾಗಿ ಚೆಸ್ ಟೂರ್ನಿ ಆಯೋಜಿಸಿ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕಿದೆ ಎಂದು ತಿಳಿಸಿದರು.
ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಡಾ. ಆಶಿಕ್ ಚಂಗಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಂದ್ಯಾವಳಿಗೆ ಬೆಂಬಲ ನೀಡಲಾಗುತ್ತಿದೆ ಎಂದರು.
ಹೆಚ್ಚಿನ ಮಾಹಿತಿಗೆ ೯೯೦೦೯೨೭೦೯೫, ೯೪೪೮೩೮೩೯೧೦ ಸಂಖ್ಯೆಯಲ್ಲಿ ಸಂಪರ್ಕಿಸಲು ತಿಳಿಸಿದರು. ಗೋಣಿಕೊಪ್ಪ ರೋಟರಿ ನಿಕಟಪೂರ್ವ ಅಧ್ಯಕ್ಷ ವಿಜಯನ್, ಖಜಾಂಚಿ ಸಚಿನ್ ಬೆಳ್ಯಪ್ಪ, ಪಿ. ಸಿ. ಕ್ಲಬ್ ಕಾರ್ಯದರ್ಶಿ ಆಂಥೋಣಿ ಇದ್ದರು.