ಮಡಿಕೇರಿ, ಆ.೮: ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ರೂಢಿ ಸಂಪ್ರದಾಯದAತೆ ಪರಾಭವ ಸಂವತ್ಸರದ ಗ್ರೀಷ್ಮ ಋತುವಿನ ದಕ್ಷಿಣಾಯನ ಕರ್ಕಾಟಕ ಮಾಸ ಆಷಾಢ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಅಂದರೆ ತಾ. ೧೨ ರಂದು ಮಧ್ಯಾಹ್ನ ೧೨ ಗಂಟೆಗೆ ಮಹಾ ಪೂಜೆಯ ನಂತರ ಶ್ರದ್ಧಾ ಭಕ್ತಿಯಿಂದ ಪೊಲಿಂಕಾನ ಉತ್ಸವ ನಡೆಯಲಿದೆ ಎಂದರು.
ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ.