ಮಡಿಕೇರಿ, ಆ. ೮ : ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ನಗರದ ಪತ್ರಿಕಾಭವನ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾಧಕ ಪತ್ರಕರ್ತರನ್ನು ಸನ್ಮಾನಿಸಲಾಯಿತು.

ರಾಜ್ಯ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಅತ್ಯುತ್ತಮ ಉದ್ಯಮಕ್ಕಾಗಿನ ಪ್ರಶಸ್ತಿಗೆ ಭಾಜನವಾದ ಶಕ್ತಿ ಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್, ಕನ್ನಡ ಭವನ ಸಂಸ್ಥೆಯಿAದ ರಾಷ್ಟçಕವಿ ಗೋವಿಂದ ಪೈ ರಾಷ್ಟಿçÃಯ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ತಮಿಳು ಪತ್ರಕರ್ತರ ಸಂಘದ ಪ್ರಶಸ್ತಿಗೆ ಭಾಜನರಾದ ಎಸ್.ಎಂ. ಮುಬಾರಕ್, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಭಾಜನರಾಗಿದ್ದ ಬಿ.ಸಿ. ದಿನೇಶ್, ಎನ್‌ಎಸ್‌ಎಸ್ ಸಂಸ್ಥೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಡಾ. ಎಂ.ಎನ್. ವನಿತ್ ಕುಮಾರ್, ಬುದ್ಧ ನಾಡ ಭೂಷಣ ಪ್ರಶಸ್ತಿ ಪಡೆದ ಜಯಪ್ಪ ಹಾನಗಲ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ ಮಾತನಾಡಿ ಈ ಸಾಲಿನ ೧೫ ತಿಂಗಳಿನಿAದ ಸಂಘವು ವ್ಯೆವಿಧ್ಯಮಯ ಕಾರ್ಯಕ್ರಮಗಳ ಮೂಲಕ ಸಮಾಜಮುಖಿಯಾಗಿದೆ. ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಉತ್ತಮ ಅಭಿಪ್ರಾಯ ಸಮಾಜ ಭಾಂದÀವರಿAದ ವ್ಯಕ್ತವಾಗಿದೆ ಎಂದರು.

ಸAಘದ ಮುಂದಿನ ಕಾರ್ಯ ಯೋಜನೆಗಳ ಕುರಿತು ಅನಿಲ್ ಈ ಸಂದರ್ಭ ಮಾಹಿತಿ ನೀಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಸಂಘದ ವಾರ್ಷಿಕ ವರದಿ ವಾಚಿಸಿದರು.

ಖಜಾಂಚಿ ಟಿ.ಕೆ. ಸಂತೋಷ್ ಲೆಕ್ಕಪತ್ರ ಮಂಡಿಸಿದರು. ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ. ರವಿಕುಮಾರ್ ಸಮಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯಿತ್ತರು.

ಪ್ರಧಾನ ಕಾರ್ಯದರ್ಶಿ ಅರುಣ್ ಕೂರ್ಗ್ ಲೆಕ್ಕಪತ್ರ ಮಂಡನೆ ಮಾಡಿದರು. ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ .ಮುರಳೀಧರ್ ಉಪಸ್ಥಿತರಿದ್ದರು. ಸಂಘದ ಗುರುತಿನ ಚೀಟಿಯನ್ನು ಇದೇ ಸಂದರ್ಭ ವಿತರಣೆ ಮಾಡಲಾಯಿತು.

ಸಂಘದ ಕುಶಾಲನಗರ ತಾಲೂಕು ಘಟಕದ ಉಪಾಧ್ಯಕ್ಷ ನವೀನ್ ಚಿಣ್ಣಪ್ಪ ಪ್ರಾರ್ಥಿಸಿ, ಜಿಲ್ಲಾ ಉಪಾಧ್ಯಕ್ಷ ಕವನ್ ಕಾರ್ಯಪ್ಪ ಸ್ವಾಗತಿಸಿದರು. ಅನಿಲ್ ಎಚ್.ಟಿ. ವಂದಿಸಿದರು.