ಕುಶಾಲನಗರ, ಆ. ೯: ಪಂಚ ಗ್ಯಾರಂಟಿ ಪೈಕಿ ಯುವ ನಿಧಿ ಫಲಾನುಭವಿಗಳಿಗೆ ಮಾನಸಿಕ ಸ್ಥೆöÊರ್ಯ ತುಂಬುವ ನಿಟ್ಟಿನಲ್ಲಿ ಸಲಹೆ ಸೂಚನೆ ನೀಡುವ ಕಾರ್ಯಗಾರವನ್ನು ತಾ. ೧೧ ರಂದು (ನಾಳೆ) ಅಳುವಾರ ಕೊಡಗು ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿ.ಪಿ ಶಶಿಧರ್ ತಿಳಿಸಿದ್ದಾರೆ.

ಅವರು ಕುಶಾಲನಗರದ ಪ್ರವಾಸಿ ಮಂದಿರದಲ್ಲಿ ಸಂಬAಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಬಹುತೇಕ ಫಲಾನುಭವಿಗಳಿಗೆ ಮಾರ್ಗದರ್ಶನದ ಕೊರತೆ ಎದುರಾಗಿದ್ದು, ಈ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಸರಕಾರದ ಮೂಲಕ ನಿರುದ್ಯೋಗ ಭತ್ಯೆ ಎರಡು ವರ್ಷಗಳ ಕಾಲ ನೀಡಲಾಗಿದೆ. ತದನಂತರ ಉದ್ಯೋಗ ಕಂಡುಕೊಳ್ಳಲು ಮಾರ್ಗದರ್ಶನದ ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಗಾರ ಅನುಕೂಲವಾಗಲಿದೆ ಎಂದರು.

ತಾಲೂಕು ವ್ಯಾಪ್ತಿಯಲ್ಲಿ ಒಟ್ಟು ೩೨೩ ಯುವನಿಧಿ ಫಲಾನುಭವಿಗಳಿದ್ದು ಅವರುಗಳನ್ನು ಒಂದೆಡೆ ಸೇರಿಸಿ ಭವಿಷ್ಯದ ಬಗ್ಗೆ ಆತ್ಮಸ್ಥೆöÊರ್ಯ ತುಂಬುವ ಸಮಾಲೋಚನಾ ಕಾರ್ಯಕ್ರಮ ಇದಾಗಿದೆ ಎಂದು ಶಶಿಧರ್ ತಿಳಿಸಿದರು.

ಕೊಡಗು ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಬೆಳಿಗ್ಗೆ ೧೧ ಗಂಟೆಗೆ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಅಪ್ಪಣ್ಣ, ಗ್ಯಾರಂಟಿ ಅನುಷ್ಠಾನ ಯೋಜನೆಯ ತಾಲೂಕು ಅಧ್ಯಕ್ಷರಾದ ವಿ.ಪಿ ಶಶಿಧರ್, ವಿಶ್ವವಿದ್ಯಾಲಯ ಕುಲಪತಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ತಾಲೂಕಿನ ಅಂತಿಮ ಪದವಿ ಅಥವಾ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬಹುದು ಎಂದು ಅವರು ಹೇಳಿದರು.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಮಂಜುನಾಥ್, ಸಹಾಯಕ ಅಧಿಕಾರಿ ಮದನ್, ಗ್ಯಾರಂಟಿ ಅನುಷ್ಠಾನ ತಾಲೂಕು ಸದಸ್ಯರಾದ ಮಲ್ಲಿಕಾರ್ಜುನ ಹಾಗೂ ಕಿಶೋರ್ ಇದ್ದರು.