ಮಡಿಕೇರಿ, ಆ. ೯: ಮಡಿಕೇರಿ - ಮಂಗಳೂರು - ಸಂಪಾಜೆ - ಮಾಣಿ ರಾಷ್ಟಿçÃಯ ಹೆದ್ದಾರಿಯ ಚೌಕಿ ಬಳಿಯ ತಿರುವಿನಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ. ಮಂಗಳೂರಿನಿAದ ಮೈಸೂರಿನತ್ತ ಗೇರು ಬೀಜ ಹೊತ್ತೊಯ್ಯುತ್ತಿದ್ದ ಲಾರಿ ಸಂಪಾಜೆ ಚೌಕಿ ಬಳಿಯ ತಿರುವಿನಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟಿçÃಯ ಹೆದ್ದಾರಿಯಲ್ಲಿ ಅಡ್ಡಲಾಗಿ ಪಲ್ಟಿಯಾಗಿತ್ತು. ಪರಿಣಾಮ ಕೆಲವು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.

ವಿಷಯ ತಿಳಿದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಜಿ. ಕೆ. ಹಮೀದ್ ತಾಜುದ್ದೀನ್ ಟರ್ಲಿ, ಸಾಜಿದ್, ಪೊಲೀಸ್ ಪ್ರಕಾಶ್ ಹಾಗೂ ಸಿಬ್ಬಂದಿ, ಊರಿನವರು ಘಟನಾ ಸ್ಥಳಕ್ಕೆ ಆಗಮಿಸಿ ಕ್ರೇನ್ ಮೂಲಕ ಲಾರಿಯನ್ನು ಎತ್ತಲಾಯಿತು. ಬಳಿಕ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಯಿತು. ಅದೃಷ್ಟವಶಾತ್ ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.